spot_img
spot_img
spot_img
28.1 C
Belagavi
Thursday, September 29, 2022
spot_img

ಮಾರೀಹಾಳದಲ್ಲಿ 57 ಲಕ್ಷ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ

spot_img

ವರದಿ : ರತ್ನಾಕರ್ ಗೌಂಡಿ

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾರೀಹಾಳ ಗ್ರಾಮದಲ್ಲಿ ಮರಾಠಾ ಸಾಂಸ್ಕೃತಿಕ ಭವನ ಹಾಗೂ ಬೆಳಗಾವಿ ಬಾಗಲಕೋಟ ಮುಖ್ಯ ರಸ್ತೆಯಿಂದ ಜನತಾ ಪ್ಲಾಟ್ ವರೆಗೆ ರಸ್ತೆಯ ಡಾಂಬರೀಕರಣ ಸೇರಿದಂತೆ 57 ಲಕ್ಷ ರೂ. ವೆಚ್ಚದ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ಜನರ ಅಪೇಕ್ಷೆಗೆ ತಕ್ಕಂತೆ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದೇನೆ. ಕೊರೋನಾ ಮತ್ತು ಪ್ರವಾದಂತಹ ಪ್ರಕೃತಿ ವಿಕೋಪದಿಂದಾಗಿ ನನ್ನ ನಿರೀಕ್ಷೆಯಂತೆ ಕೆಲಸ ಮಾಡಲು ಸಾಧ್ಯವಾಗದಿದ್ದರೂ ಗ್ರಾಮೀಣ ಕ್ಷೇತ್ರದಲ್ಲಿ ಹಿಂದೆಂದೂ ಆಗದಷ್ಟು ಕೆಲಸಗಳಾಗುತ್ತಿವೆ.

ಯಾರು ಏನೇ ಹೇಳಿದರೂ ಅಭಿವೃದ್ಧಿ ಕೆಲಸ ಮಾತ್ರ ನಿಂತಿಲ್ಲ. ಚುನಾವಣೆ ಪೂರ್ವದ ನನ್ನ ಭರವಸೆಗಳಿಗೆ ಬದ್ಧನಾಗಿ ಕೆಲಸ ಮಾಡುತ್ತಿದ್ದೇನೆ. ನಿಮ್ಮೆಲ್ಲರ ಪ್ರೀತಿ, ಪ್ರೋತ್ಸಾಹ, ಸಹಕಾರಗಳಿಂದಾಗಿ ಇದು ಸಾಧ್ಯವಾಗಿದೆ ಎಂದು ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಗ್ರಾಮದ ಹಿರಿಯರು, ಮೃಣಾಲ ಹೆಬ್ಬಾಳಕರ್, ಬಸವರಾಜ ಮ್ಯಾಗೋಟಿ, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

spot_img

Related News

ಗಂಟುರೋಗದಿಂದ ದನಗಳು ಮೃತಪಟ್ಟರೆ 20 ಸಾವಿರ ರೂ.ಗಳ ಪರಿಹಾರ : ಸಿಎಂ ಬೊಮ್ಮಾಯಿ 

ಹಾವೇರಿ : ಗಂಟುರೋಗದಿಂದ ದನಗಳು ಮೃತಪಟ್ಟರೆ 20 ಸಾವಿರ ರೂಪಾಯಿಗಳ ಪರಿಹಾರ ಒದಗಿಸಲಾಗುವುದು ಹಾಗೂ ಗಂಟು ರೋಗದ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು ಹಾವೇರಿಯ ಗುರುಭವನದಲ್ಲಿ ಹಾವೇರಿ...

ಮೋದಿ ಅವರ ನೇತೃತ್ವದಲ್ಲಿ 150 ಸ್ಥಾನಗಳ ಗೆಲುವ ಪಣ : ಯಡಿಯೂರಪ್ಪ 

ಶಿವಮೊಗ್ಗ: ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲುವ ಪಣ ಹೊಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರ ನೇತೃತ್ವದಲ್ಲಿ ದೇಶ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -