ಯಾದಗಿರಿ: ಜೂನ್ನಲ್ಲಿ ಕೈಕೊಟ್ಟಿ ಮುಂಗಾರು ಮಳೆ ಜುಲೈ ಅಂತ್ಯದಲ್ಲಿ ವರುಣದೇವ ಕೃಪೆ ತೋರಿದ್ದಾನೆ. ಕಳೆದ ಮೂರು ದಿನಗಳಿಂದ ಯಾದಗಿರಿ ಜಿಲ್ಲೆಯಾದ್ಯಂತ 3 ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು (ಜುಲೈ 21) ಯಾದಗಿರಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಯಾದಗಿರಿ, ಸುರಪುರ, ಹುಣಸಗಿ, ಶಹಾಪುರ, ವಡಗೇರಾ ಹಾಗೂ ಗುರಮಠಕಲ್ ತಾಲೂಕಿನ ಪ್ರಾಥಮಿಕ, ಪ್ರೌಢಶಾಲೆ, ಅನುದಾನಿತ, ಅನುದಾನ ರಹಿತ ಶಾಲೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಇಂದಿನ ಬದಲಿಗೆ ಭಾನುವಾರ ಶಾಲೆಗಳ್ನು ನಡೆಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಕಳೆದ ಹಲವು ದಿನಗಳಿಂದ ಕರ್ನಾಟಕದ ನಾನಾ ಭಾಗಗಳಲ್ಲಿ ಮಳೆಯಾಗುತ್ತಿದ್ದರೂ ಸಹ ಯಾದಗಿರಿಯಲ್ಲಿ ಮಾತ್ರ ಮಳೆ ಅಭಾವದಿಂದ ರೈತರು ಸಂಕಷ್ಟ ಎದುರಿಸುವಂತಾಗಿತ್ತು. ತಮ್ಮ ಜಿಲ್ಲೆಗೆ ವರುಣ ದೇವನ ಕೃಪೆ ಯಾವಾಗ ಆಗಲಿದೆ ಎಂದು ಅನ್ನದಾತರು ಯೋಚಿಸುತ್ತಿದ್ದರು. ಕೊನೆಗೂ ಮಳೆರಾಯ ಯಾದಗಿರಿ ಜಿಲ್ಲೆ ರೈತರ ಪಾಲಿಗೆ ಬಂದಿದ್ದು, ಕಳೆದ ಮೂರು ದಿನಗಳಿಂದ ಜಿಟಿ ಜಿಟಿ ಮಳೆಯಾಗುತ್ತಿದೆ. ಇದರಿಂದ ಹೊ;-ಗದ್ದೆಗಳು ಹಸಿಯಾಗಿದ್ದು, ರೈತರು ಸಂತಸಗೊಂಡಿದ್ದಾರೆ