ಕಾಬೂಲ್ (ಅಫ್ಘಾನಿಸ್ತಾನ): ಅಫ್ಘಾನಿಸ್ತಾನದಲ್ಲಿ ಇಂದು ಮುಂಜಾನೆ 1:40 ಕ್ಕೆ 4.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ʻಅಫ್ಘಾನಿಸ್ತಾನದಲ್ಲಿ ಬುಧವಾರ ಮುಂಜಾನೆ 1:40 ಕ್ಕೆ ಭೂಮಿಯಿಂದ 136 ಕಿಮೀ ಆಳದಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿದೆʼ ಎಂದು NCS ಟ್ವೀಟ್ ಮಾಡಿದೆ.
ಭೂಕಂಪದಿಂದಾದ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ. ಹೆಚ್ಚನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾರ್ಚ್ 2 ರಂದು ಅಫ್ಘಾನಿಸ್ತಾನದ ಫೈಜಾಬಾದ್ ಪ್ರದೇಶದಲ್ಲಿ 4.1 ತೀವ್ರತೆಯ ಭೂಕಂಪ ಅಪ್ಪಳಿಸಿತು.