ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ, ಮುಂಬರುವ ಚುನಾವಣೆಗೂ ಮುನ್ನವೇ 224 ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳನ್ನು ನೇಮಿಸಿ ಆದೇಶಿಸಿದೆ.
ಈ ಸಂಬಂಧ ಕೇಂದ್ರ ಚುನಾವಣಾ ಆಯೋಗದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಕರ್ನಾಟಕದಲ್ಲಿ 224 ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳ ನೇಮಕ ಮಾಡಲಾಗಿದೆ. ಈ ಕುರಿತು ರಾಜ್ಯ ಗೆಜೆಟ್ ಪತ್ರದಲ್ಲಿ ಅಧಿಸೂಚನೆಯನ್ನು ಹೊರಡಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಲಾಗಿದೆ.
224 ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳನ್ನು ನೇಮಕ ಸಂಬಂಧ ಶೀಘ್ರವೇ ಗೆಜೆಟ್ ಅಧಿಸೂಚನೆಯಲ್ಲಿ ಪ್ರಕಟಣೆ ಹೊರಡಿಸಿವುದು. ಅಧಿಸೂಚನೆಯನ್ನು ಒಳಗೊಂಡಿರುವ ರಾಜ್ಯ ಗೆಜೆಟ್ ನ ಆರು ಪ್ರತಿಗಳನ್ನು ತಕ್ಷಣವೇ ಆಯೋಗಕ್ಕೆ ಕಳುಹಿಸುವಂತೆ ತಿಳಿಸಿದೆ.