ಬೆಂಗಳೂರು: ವಿಧಾನಪರಿಷತ್ ಸಭಾಪತಿಯಾಗಿದ್ದ ಬಸವರಾಜ ಹೊರಟ್ಟಿ ರಾಜೀನಾಮೆ ನೀಡಿದ ಬಳಿಕ, ಆ ಸ್ಥಾನ ತೆರವಾಗಿತ್ತು. ಹೀಗಾಗಿ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ಅವರನ್ನು ನೇಮಕ ಮಾಡಲಾಗಿತ್ತು. ಇದೀಗ ಈ ಸ್ಥಾನಕ್ಕೆ ಚುನಾವಣೆ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ವಿಧಾನ ಪರಿಷತ್ತಿನ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮಗಳ ನಿಯಮ7ರ ಉಪ ನಿಯಮ(1)ರಂತೆ ದಿನಾಂಕ ಡಿಸೆಂಬರ್ 12ರಂದು ಸಭಾಪತಿಯವರ ಚುನಾವಣೆಯನ್ನು ನಡೆಸಲು ದಿನಾಂಕ ನಿಗದಿ ಪಡಿಸಿದ್ದಾರೆ.
ಈ ಹಿನ್ನಲೆಯಲ್ಲಿ ದಿನಾಂಕ ಡಿಸೆಂಬರ್ ರಂದು ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿರುವಂತ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.