spot_img
spot_img
spot_img
18.7 C
Belagavi
Monday, September 26, 2022
spot_img

ಗ್ರಾಮೀಣ ಕ್ಷೇತ್ರದ ಜನರಲ್ಲಿದ್ದ ಅನಾಥ ಪ್ರಜ್ಞೆ ಲಕ್ಷ್ಮೀ ಹೆಬ್ಬಾಳಕರ್ ಶಾಸಕರಾದ ನಂತರ ನಿವಾರಣೆ : ಚನ್ನರಾಜ ಹಟ್ಟಿಹೊಳಿ

spot_img
spot_img

For Breaking News Download App

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರಲ್ಲಿದ್ದ ಅನಾಥ ಪ್ರಜ್ಞೆ ಲಕ್ಷ್ಮೀ ಹೆಬ್ಬಾಳಕರ್ ಶಾಸಕರಾದ ನಂತರ ದೂರವಾಗಿದೆ. ಶಾಸಕರು ಕ್ಷೇತ್ರದ ಪರವಾಗಿ, ಕ್ಷೇತ್ರದ ಜನರ ಪರವಾಗಿ ಗಟ್ಟಿಯಾಗಿ ನಿಂತುಕೊಂಡು ಕೆಲಸ ಮಾಡುತ್ತಿರುವುದು ಎಲ್ಲರಿಗೂ ಸಮಾಧಾನ ತಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದ ಲಿಂಗರಾಜ ಕಾಲೋನಿಯ ಉದ್ಯಾನವನದ ಅಭಿವೃದ್ಧಿಯ ಸಲುವಾಗಿ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ 19.55 ಲಕ್ಷ ರೂ,ಗಳ ಮಂಜೂರಾಗಿದ್ದು, ಶನಿವಾರ ಉದ್ಯಾನವನದ ಅಭಿವೃದ್ಧಿಯ ಕಾಮಗಾರಿಗಳಿಗೆ ಚಾಲನೆಯನ್ನು ನೀಡಿ, ನೂತನವಾಗಿ ನಿರ್ಮಾಣಗೊಂಡ ಬಸವ ಭವನ ಹಾಗೂ ಅಡುಗೆ ಮನೆಯ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಲಕ್ಷ್ಮೀ ಹೆಬ್ಬಾಳಕರ್ ಕ್ಷೇತ್ರದ ಜನರಿಗಾಗಿ 24 ಗಂಟೆಯೂ ಕೆಲಸ ಮಾಡುತ್ತಿದ್ದಾರೆ. ಯಾವುದೇ ಸಮಯದಲ್ಲಿ ಸಂಪರ್ಕಕ್ಕೆ ಸಿಗುತ್ತಾರೆ. ಶಾಸಕರು ಅಧಿವೇಶನ ಮತ್ತಿತರ ಕಾರಣಕ್ಕಾಗಿ ಬೆಳಗಾವಿಯಿಂದ ಹೊರಗಿದ್ದರೂ ನಾನು ಮತ್ತು ಮೃಣಾಲ ಹೆಬ್ಬಾಳಕರ್ ಜನರ ಕುಂದು ಕೊರತೆ ಆಲಿಸುವ ಕೆಲಸ ಮಾಡುತ್ತಿದ್ದೇವೆ. ಹಾಗಾಗಿ ಜನರು ನಮ್ಮನ್ನು ತಮ್ಮ ಕುಟುಂಬದ ಸದಸ್ಯರೆಂದೇ ತಿಳಿದು ಕಷ್ಟ, ಸುಖಗಳನ್ನು ಹಂಚಿಕೊಳ್ಳುತ್ತಿದ್ದಾರೆ ಎಂದು ಚನ್ನರಾಜ ವಿವರಿಸಿದರು.

ಪ್ರವಾಹ ಮತ್ತು ಕೊರೆನಾದಂತಹ ಪ್ರಕೃತಿ ವಿಕೋಪದಿಂದಾಗಿ ಅಡೆ ತಡೆ ಉಂಟಾದರೂ ನಾವು ಜಗ್ಗಲಿಲ್ಲ. ಆದ ಎಲ್ಲ ಹಾನಿಗಳನ್ನು ಪುನರ್ ನಿರ್ಮಾಣ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಕ್ಷೇತ್ರವನ್ನು ರಾಜ್ಯದಲ್ಲೇ ಗಮನ ಸೆಳೆಯುವಂತೆ ಅಭಿವೃದ್ಧಿಪಡಿಸಿ ತೊರಿಸುವ ಸಂಕಲ್ಪ ನಮ್ಮದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸಂಸದೆ ಮಂಗಲಾ ಅಂಗಡಿ, ಕಾಂಗ್ರೆಸ್ ಯುವ ಮುಖಂಡ ಮೃಣಾಲ ಹೆಬ್ಬಾಳಕರ್ ಹಾಗೂ ಗ್ರಾಮಸ್ಥರು, ಗುತ್ತಿಗೆದಾರರು ಉಪಸ್ಥಿತರಿದ್ದರು.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -