ಕಾಂತರಾಜ್ ವರದಿಯನ್ನು ತೆಗೆದುಕೊಂಡು ಹೋಗಿ ಬೆಂಕಿಗೆ ಹಾಕಿ ಸುಡಬೇಕು ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಸದಸ್ಯ ಕಾರ್ಯದರ್ಶಿ ಸಹಿಯೇ ಇಲ್ಲದ ಕಾಂತರಾಜ್ ರಿಪೋರ್ಟ್ ಅನ್ನು ತೆಗೆದುಕೊಂಡು ಹೋಗಿ ಬೆಂಕಿಗೆ ಹಾಕಿ ಸುಡಬೇಕು. ಕಾಂತರಾಜ್ ವರದಿ ವೈಜ್ಞಾನಿಕವೇ ಅಲ್ಲ. ರಾಜ್ಯದಲ್ಲಿ ಜಾತಿಗಣತಿ ವರದಿ ಬಿಡುಗಡೆಗೆ ನಾಮಕಾವಸ್ಥೆ ಸಿದ್ಧತೆ ಮಾಡುತ್ತಿದ್ದಾರೆ. ಕಾಂತರಾಜ್ ರಿಪೋರ್ಟ್ ಬಗ್ಗೆ ಇಬ್ಬರು ಈಗ ಬಡಿದಾಡುತ್ತಿದ್ದಾರೆ. ನಾನೇ ಹಿಂದುಳಿದ ವರ್ಗಗಳ ಚಾಂಪಿಯನ್ ಅಂತಾ ಪ್ರೊಜೆಕ್ಟ್ ಮಾಡಿಕೊಳ್ಳಲು ಸಿದ್ದರಾಮಯ್ಯ ಕಾಂತರಾಜ್ ರಿಪೋರ್ಟ್ ಬಗ್ಗೆ ಎಂಟು ವರ್ಷಗಳಿಂದ ಮತ್ತೆ ಮತ್ತೆ ಹೇಳಿದರು.
ನಾಳೆ ಬಾ ಅನ್ನೋದು ಸಿದ್ದರಾಮಯ್ಯನವರ ಘೋಷಣೆಯಾಗಿದೆ. ಹಿಂದುಳಿದ ವರ್ಗ, ದಲಿತರ ಉದ್ಧಾರ ಅವರ ಉದ್ದೇಶ ಅಲ್ಲ. ವರದಿ ಬಿಡುಗಡೆ ಮಾಡಿದರೆ ಕೋರ್ಟ್ನಲ್ಲಿ ಒಂದೇ ದಿನದಲ್ಲಿ ಬಿದ್ದು ಹೋಗುತ್ತದೆ. ಸಿಎಂ ಒಂದು ಅಭಿಪ್ರಾಯ, ಡಿಸಿಎಂ ಒಂದು ಅಭಿಪ್ರಾಯ ಹೊಂದಿದ್ದಾರೆ. ಒಂದೇ ಸರ್ಕಾರದಲ್ಲಿ ಎರಡು ಅಭಿಪ್ರಾಯ ಇರುವುದರಿಂದ ಅವರಿಗೆ ಮುಂದುವರಿಯಲು ಅಧಿಕಾರವಿಲ್ಲ. ಕಾಂತರಾಜ್ ರಿಪೋರ್ಟ್ ಬಗ್ಗೆ ಮೊದಲು ಸರ್ಕಾರ ತೀರ್ಮಾನ ಮಾಡಲಿ. ನಂತರ ವಿಪಕ್ಷವಾಗಿ ಬಿಜೆಪಿ ತನ್ನ ಅಭಿಪ್ರಾಯ ಹೇಳುತ್ತದೆ. ಜಾತಿ ಗಣತಿ ವರದಿ ಬಗ್ಗೆ ಬಿಜೆಪಿ ಅಭಿಪ್ರಾಯ ಕೇಳಲು ಅಲ್ಲಿಯ ತನಕ ಸರ್ಕಾರವೇ ಇರಲ್ಲ. ವ್ಯವಸ್ಥಿತವಾಗಿ ಇಡೀ ದೇಶಕ್ಕೆ ಅನ್ವಯವಾಗುವಂತೆ ರಿಸರ್ವೇಷನ್ ಬಗ್ಗೆ ಬಿಜೆಪಿ ಒಂದು ಸ್ಪಷ್ಟ ನಿಲುವು ತಳೆಯಲಿದೆ ಎಂದರು.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...