spot_img
spot_img
spot_img
spot_img
spot_img
spot_img
spot_img
spot_img
spot_img
26.1 C
Belagavi
Friday, September 22, 2023
spot_img

ಪ್ರಜಾಪ್ರಭುತ್ವದ ಆಶಯಗಳನ್ನು ಪ್ರತಿಯೊಬ್ಬರು ಗೌರವಿಸಬೇಕು: ನಾವಲಗಟ್ಟಿ

ಬೆಳಗಾವಿ: ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ರಚಿತವಾಗಿರುವ ಪ್ರಜಾಪ್ರಭುತ್ವ ಕೇವಲ ಸಾಂವಿಧಾನಿಕ ರಚನೆಯಲ್ಲ, ಅದೊಂದು ಚೈತನ್ಯವಾಗಿದೆ. ಭಾರತದಲ್ಲಿ ಪ್ರಜಾಪ್ರಭುತ್ವವು ಕೇವಲ ಸಂವಿಧಾನದ ಹರಿವುಗಳ ಸಂಗ್ರಹವಾಗಿರದೇ ನಮ್ಮೆಲ್ಲರ ಜೀವನದ ಹರಿವಾಗಿದೆ. ಆದ್ದರಿಂದ ಪ್ರತಿಯೊಬ್ಬರು ಪ್ರಜಾಪ್ರಭುತ್ವದ ಆಶಯಗಳನ್ನು ಗೌರವಿಸಬೇಕು ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ವಿನಯ್ ನಾವಲಗಟ್ಟಿ ಹೇಳಿದರು.

ನಗರದ ಕಾಂಗ್ರೆಸ್‌ ಭವನದಲ್ಲಿ ನಡೆದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆಯಲ್ಲಿ ಅವರು ಮಾತನಾಡಿ, ವಿಶ್ವದಲ್ಲೇ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿರುವ ನಮ್ಮ ಭಾರತವು ವೈವಿಧ್ಯತೆ ಯಲ್ಲಿ ಏಕತೆಯನ್ನು ಜಗತ್ತಿಗೆ ಸಾರುವ ಮೂಲಕ ಪ್ರಜಾಪ್ರಭುತ್ವದ ಮೂಲ ಉದ್ದೇಶ ವನ್ನು ಸಾರುತ್ತಿರುವ ಮಾದರಿ ರಾಷ್ಟ್ರವಾಗಿದೆ. ಪ್ರಜಾಪ್ರಭುತ್ವ ಎಂದರೆ ಪ್ರಜೆಗಳ ಆಳ್ವಿಕೆ. ಸಂವಿಧಾನ ಎಂದರೆ ಹಕ್ಕುಗಳು, ಕರ್ತವ್ಯಗಳು, ತತ್ವಗಳು ಮತ್ತು ಕಾನೂನಿನ ಮೂಲಕ ಪ್ರಜಾ ಪ್ರಭುತ್ವದ ಆಶಯವನ್ನು ಎತ್ತಿ ಹಿಡಿಯುವ ಪವಿತ್ರ ಗ್ರಂಥ. ಈ ಆಶಯದೊಂದಿಗೆ ಆಚರಿಸಲಾಗುತ್ತಿರುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು “ನಾವು ಭಾರತದ ಜನರು’ ಎಂಬ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ವಾಚನ ಮಾಡುವ ಮೂಲಕ ವಿಶಿಷ್ಠ ದಾಖಲೆ ನಿರ್ಮಿಸುವ ಕರ್ನಾಟಕ ಸರ್ಕಾರದ ಅಭಿಯಾನ ಒಂದು ಮಹತ್ವದ ಹೆಜ್ಜೆಯಾಗಿದೆ ಎಂದರು.

ಇದಕ್ಕು ಮೊದಲು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ವಿನಯ್ ನಾವಲಗಟ್ಟಿ “ಸಂವಿಧಾನ ಪೀಠ” ಪ್ರತಿಜ್ಞಾ ವಿಧಿ ಬೋಧಿಸಿದರು. ನಂತರ ವೇದಿಕೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪ ನಮನ ಸಲ್ಲಿಸಿದರು.

ಈ ವೇಳೆ ರಾಜಸಲೀಂ ಕಾಶಿಮಣ್ಣವರ, ಬಸವರಾಜ ಶೇಗಾವಿ, ಶೇಖರ್ ಐತಿ, ಜಗದೀಶ ಸಾವಂತ್, ಶಕೀಲ್ ಮುಲ್ಲಾ, ಬಾಳೇಶ ದಾಸನಟ್ಟಿ, ರಾಜು ಶಿಂಘೆ, ಅನ್ನಪೂರ್ಣ ಅಸುರಕರ್, ರಿಚ್‌ಮನ್ರಿಕಿ ನವಗ್ರಹ, ತಬಸ್ಸುಮ್ ಮುಲ್ಲಾ, ಕಾರ್ಪೊರೇಟರ್‌ಗಳಾದ ಅಫ್ರೋಜ್ ಮುಲ್ಲಾ, ಕುರ್ಶೀದ್ ಮುಲ್ಲಾ, ಮಾ.ಅಬ್ದುಲಸ್ ಕಡೊಲಕ್ಸಿ, ಮಾ.ಅಬ್ದುಲಸ್ ಮೆ. ಮುಲ್ಲಾ ಉಪಸ್ಥಿತರಿದ್ದರು.

Related News

ಬೆಳಗಾವಿ ಜಿಲ್ಲೆಯಲ್ಲಿ 14 ಗ್ರಾ.ಪಂಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ

ಬೆಳಗಾವಿ : 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೆಳಗಾವಿ ಜಿಲ್ಲೆಯ 14 ಗ್ರಾಮ ಪಂಚಾಯತಿಗಳು ಆಯ್ಕೆಯಾಗಿದ್ದು ಜಿಲ್ಲಾ ಪಂಚಾಯತ್ ಕಾರ್ಯಾಲಯ ಈ ಕುರಿತು ಆದೇಶ ನೀಡಿದೆ. ಖಾನಾಪುರ – ಬೇಕವಾಡ, ಕಿತ್ತೂರು –...

ಚಂದ್ರಯಾನ-3 ಮೇಲೆ ಇಸ್ರೋ ಕಣ್ಣು ಇಂದು ಎಚ್ಚೆತ್ತುಕ್ಕೊಳ್ಳುತ್ತಾ ಲ್ಯಾಂಡರ್ ಮತ್ತು ರೋವರ್

ಬೆಂಗಳೂರು: ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -