ಅಥಣಿ : ಶಿಕ್ಷಣ ಕ್ಷೇತ್ರಕ್ಕೆ ಡಾ . ಅಬುಲ್ ಕಲಾಂ ಆಜಾದ್ ಅವರ* ಕೊಡುಗೆ ಅಪಾರವಾಗಿದೆ. ಅವರು ದೇಶದ ಪ್ರತಿಯೊಬ್ಬರೂ ಶಿಕ್ಷಣ ಕಲಿಬೇಕು. ಇದರಿಂದ ದೇಶದ ಪ್ರಗತಿ ಕಾಣಲು ಸಾಧ್ಯವೆಂದು ಶೈಕ್ಷಣಿಕ ಕ್ಷೇತ್ರದ ಸುಧಾರಣೆಗೆ ಶ್ರಮಿಸಿದ್ದರು ಎಂದು ಮಾಜಿ ಉಪಮುಖ್ಯಮಂತ್ರಿಗಳು, ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಲಕ್ಷ್ಮಣ ಸಂ. ಸವದಿಯವರು ಹೇಳಿದರು.
ಅವರು ಪಟ್ಟಣದಲ್ಲಿ ದಿ. 11-11-23ರಂದು ಜರುಗಿದ ದೇಶದ ಪ್ರಥಮ ಶಿಕ್ಷಣ ಸಚಿವರು, ಸ್ವಾತಂತ್ರ್ಯ ಹೋರಾಟಗಾರರು , ಭಾರತ ರತ್ನ ಡಾ. ಅಬುಲ್ ಕಲಾಂ ಆಜಾದ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಡಾ. ಅಬುಲ್ ಕಲಾಂ ಆಜಾದ್ ಅವರು ಶೈಕ್ಷಣಿಕ ಕ್ಷೇತ್ರದ ಸುಧಾರಣೆ, ಸ್ವಾತಂತ್ರ್ಯ ಚಳವಳಿಯಲ್ಲಿ ಸಕ್ರಿಯ ಪಾತ್ರ ವಹಿಸಿದ್ದರು. ದೇಶದಲ್ಲಿ ಹಿಂದು-ಮುಸ್ಲಿಂ ಬಾಂಧವರು ಒಗ್ಗಟ್ಟಿನಿಂದ ಬಾಳಲು ಸೌಹಾರ್ದತೆ ಸಂದೇಶ ಪಸರಿಸಿದ್ದರು. ಮಹಾತ್ಮಾ ಗಾಂಧೀಜಿ, ಡಾ. ಬಿ.ಆರ್. ಅಂಬೇಡ್ಕರ್, ಅಬುಲ್ ಕಲಾಂ ಆಜಾದ್ ಅವರಂತಹ ಮಹಾನ್ ವ್ಯಕ್ತಿಗಳ ವಿಚಾರಧಾರೆಗಳ ಮಾರ್ಗದರ್ಶನದಲ್ಲಿ ಪ್ರಸ್ತುತ ಸಮಾಜದ ಜನತೆ ಮುನ್ನಡೆದರೆ ದೇಶದಲ್ಲಿ ಬದಲಾವಣೆ ಕಾಣಲು ಸಾಧ್ಯವಾಗಲಿದೆ. ಇಂತಹ ಮಹಾತ್ಮರ ಜಯಂತಿಗಳನ್ನು ಆಚರಿಸುವುದಕ್ಕೂ ಸಾರ್ಥಕವಾಗಲಿದೆ ಎಂದು ಲಕ್ಷ್ಮಣ ಸಂ. ಸವದಿಯವರು ಅಭಿಪ್ರಾಯಪಟ್ಟರು. ಮುಸ್ಲಿಂ ಬಾಂಧವರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಶಿಕ್ಷಣದಿಂದ ಮಾತ್ರ ಮಕ್ಕಳ ಭವಿಷ್ಯ ಉಜ್ವಲಗೊಳ್ಳುವುದು ಎಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಗಜಾನನ ಮಂಗಸೂಳಿ, ತೆಲಸಂಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಕಾಂತ ಪೂಜಾರಿ, ಶಿವಾನಂದ ಗುಡ್ಡಾಪುರ, ಅಸ್ಲಂ ನಾಲಬಂದ, ಯೂನಸ್ ಮುಲ್ಲಾ, ಮೌಲಾನ್ ಅಬ್ಬಾಸ್, ಮುಪ್ತಿ ಹಬಿಬುಲ್ಲಾ, ಪುರಸಭೆ ಸದಸ್ಯರಾದ ರಾವಸಾಬ ಐಹೊಳೆ, ಸಯ್ಯದ್ ಅಮೀನ್ ಗದ್ಯಾಳ, ಆಶೀಫ್ ತಾಂಬೋಳಿ, ಕಲ್ಲೇಶ ಮಡ್ಡಿ ಸೇರಿದಂತೆ ಮತ್ತಿತರ ಗಣ್ಯಮಾನ್ಯರು, ಮುಸ್ಲಿಂ ಸಮಾಜ ಬಾಂಧವರು ಪಾಲ್ಗೊಂಡಿದ್ದರು.
ವರದಿ: ಹಜರತಅಲಿ ಕಮಾಲನವರ