ಕೊವಿಡ್ ಅಕ್ರಮದ ತನಿಖೆಗೆ ಆಯೋಗ ರಚನೆ ಮಾಡಿದ ವಿಚಾರವಾಗಿ ಮಾತನಾಡಿದ ಮಾಜಿ ಆರೋಗ್ಯ ಸಚಿವ ಕೆ ಸುಧಾಕರ್, ಸರ್ಕಾರ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಕೊವಿಡ್ ನಿಯಂತ್ರಿಸಲು ಸಫಲ ಆಗಿತ್ತು. ಈಗ ಅಕ್ರಮ ಆಗಿದೆ ಅಂತಾ ಆರೋಪ ಮಾಡಿ ತನಿಖೆಗೆ ಮುಂದಾಗಿದ್ದಾರೆ. ಇದು ರಾಜಕೀಯ ಪ್ರೇರಿತ ಎಂದರು.
ಕೊವಿಡ್ ವಿಚಾರದಲ್ಲಿ ಸರ್ಕಾರಕ್ಕೆ ಕಾಂಗ್ರೆಸ್ಸಿಗರು ಸಹಕಾರ ಕೊಡಲಿಲ್ಲ. ಕೊವಿಡ್ ಇದ್ದಾಗ ಕಾಂಗ್ರೆಸ್ನವರಿಗೆ ಸಾಮಾಜಿಕ ಜವಾಬ್ದಾರಿ ಇರಲಿಲ್ಲ. ಆಗ ಪಾದಯಾತ್ರೆ ಮಾಡಿದವರ ವಿರುದ್ಧ ಪ್ರಕರಣ ಹಾಕಲಾಗಿತ್ತು. ಇವರ ಸರ್ಕಾರ ಬಂದ ನಂತರ ಆ ಕೇಸ್ಗಳನ್ನೆಲ್ಲಾ ಹಿಂಪಡೆದಿದ್ದಾರೆ. ತನಿಖೆ ನಡೆಸುವ ಉದ್ದೇಶ ಇದ್ದಿದ್ದರೆ ಲೋಕಾಯುಕ್ತಕ್ಕೆ ಕೊಡಬಹುದಿತ್ತು ಎಂದರು.