ಬೆಂಗಳೂರು: ರೈತ ಮುಖಂಡರು, ಕನ್ನಡ ಪರ ಹೋರಾಟಗಾರರ ಮೇಲೆ ದಾಖಲಾದ ಒಟ್ಟು 35 ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿನಡೆದ ಸಚಿವ ಸಂಪುಟ ಸಭೆಯಲ್ಲಿ ರೈತ ಮುಖಂಡರು ಸೇರಿದಂತೆ ಇತರರ ವಿರುದ್ಧ ದಾಖಲಾದ 35 ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆದುಕೊಳ್ಳಲು ತೀರ್ಮಾನಿಸಲಾಗಿದೆ.
ಸಚಿವ ಸಂಪುಟ ಉಪಸಮಿತಿ ಆಧರಿಸಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಇದರಲ್ಲಿ ಬಿಜೆಪಿ ಕಾರ್ಯಕರ್ತರು, ಹಿಂದೂ ಪರ ಕಾರ್ಯಕರ್ತರು ಕೂಡ ಸೇರಿದ್ದಾರೆ ಎಂದು ಹೇಳಲಾಗಿದೆ.