ಬೆಳಗಾವಿ: ಗಡಿ ವಿವಾದದ ಸಂಬಂಧ ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರ ವಿರುದ್ಧ ಹಿರೇಬಾಗೇವಾಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. 8 ರಿಂದ 12 ಕರವೇ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ನಿನ್ನೆ ಬೆಳಗಾವಿ ಪ್ರವೇಶಕ್ಕೆ ಅವಕಾಶ ನೀಡದಿದ್ದಕ್ಕೆ ಕರವೇ ಆಕ್ರೋಶ ವ್ಯಕ್ತಪಡಿಸಿತ್ತು. ಮಹಾರಾಷ್ಟ್ರ ನೋಂದಣಿಯ ಲಾರಿಯ ಮೇಲೆ ಕಲ್ಲು ತೂರಿ ಗಾಜು ಪುಡಿ ಪುಡಿ ಮಾಡಲಾಗಿತ್ತು.
ಗುಂಪು ಕಟ್ಟಿಕೊಂಡು ಗಲಾಟೆ ಮಾಡಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಆದ್ರೆ ಐಪಿಸಿ ಸೆಕ್ಷನ್ 143, 147, 341, 427, 149 ಅಡಿ 12 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಹಿರೇಬಾಗೇವಾಡಿ ಠಾಣೆಯಲ್ಲಿ ಪೊಲೀಸರಿಂದ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ.