ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲು 

ಬೆಂಗಳೂರು : ಬಿಡಿಎ ವಸತಿ ಯೋಜನೆ ಕಾಮಗಾರಿಗೆ ಗುತ್ತಿಗೆ ನೀಡಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.

ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಅವರ ಪುತ್ರ ವಿಜಯೇಂದ್ರ ಹಾಗೂ ಸಚಿವ ಸೋಮಶೇಖರ್, ಶಶಿಧರ್ ಮುರಳಿ, ಸಂಜಯ್ ಶ್ರೀ, ಚಂದ್ರಕಾಂತ ರಾಮಲಿಂಗಂ ಹಾಗೂ ವಿರೂಪಾಕ್ಷಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

ರಾಮಲಿಂಗಂ ಕನ್ಸ್ ಸ್ಟ್ರಕ್ಷನ್ ಕಂಪನಿಯಿಂದ ಐದು ನಕಲಿ ಕಂಪನಿಗಳ ಮೂಲಕ ಆರೋಪಿತರು ಕೋಟ್ಯಾಂತರ ರೂಪಾಯಿ ಪಡೆದಿದ್ದಾರೆ ಎಂದು ಆರೋಪಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಟಿ. ಜೆ ಅಬ್ರಾಹಂ ಅರ್ಜಿ ಸಲ್ಲಿಸಿದ್ದರು.