ಶಿವಮೊಗ್ಗ: ಹಳೆ ವೈಷಮ್ಯ ಹಿನ್ನೆಲೆ ಎರಡು ಗುಂಪುಗಳ ನಡುವೆ ಗಲಾಟೆ ಆಗಿದ್ದು, ಈ ವೇಳೆ ಗಲಾಟೆಯಲ್ಲಿ 5 ಮಂದಿಗೆ ಚಾಕು ಇರಿದ ಘಟನೆ ಶಿವಮೊಗ್ಗದ ದ್ರೌಪದಮ್ಮ ಸರ್ಕಲ್ನಲ್ಲಿ ತಡರಾತ್ರಿ ನಡೆದಿದೆ.
ಪವನ್ ಹಾಗೂ ಕಿರಣ್ ಎಂಬ ಎರಡು ಗುಂಪಿನಿಂದ ಗಲಾಟೆ ನಡೆದಿದ್ದು, ಚಾಕು ಇರಿತಕ್ಕೊಳಗಾದ ಐದು ಮಂದಿ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಸುವರ್ಣ ಸೌಧ ಬೆಳಗಾವಿ: ಮಹಿಳೆಯರು ಮತ್ತು ಮಕ್ಕಳಲ್ಲಿರುವ ರಕ್ತಹೀನತೆ(ಅನೀಮಿಯಾ)ವನ್ನು 2030 ರೊಳಗೆ ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯ ನಾಗರಾಜ್...
ಸುವರ್ಣ ಸೌಧ ಬೆಳಗಾವಿ: ರಾಜ್ಯದಲ್ಲಿ ಈಗಾಗಲೇ ಏಳು ಆನೆ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಆನೆ ಹಿಡಿಯಲು ನಿಯೋಜಿಸಿರುವ ಸಿಬ್ಬಂದಿಗಳಿಗೆ ಹೆಚ್ಚಿನ ತರಬೇತಿ ನೀಡಲಾಗುವುದ ಎಂದು ಅರಣ್ಯ ,ಜೈವಿಕ ಮತ್ತು ಪರಿಸರ ಸಚಿವ ಈಶ್ವರ...