ಬೆಂಗಳೂರು: ಪ್ರಸ್ ಕ್ಲಬ್ ನ ವತಿಯಿಂದ 2024 ನೇ ಸಾಲಿನ ವಿಶೇಷ ಪ್ರಶಸ್ತಿಗೆ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ನವರು ಆಯ್ಕೆಯಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ವತಿಯಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.
ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖ ಯೋಜನೆಯಾದ ಅನ್ನಭಾಗ್ಯ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿರುವ ಹಿನ್ನಲೆಯಲ್ಲಿ ಮಾನ್ಯ ಸಚಿವರಿಗೆ ವಿಶೇಷ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸಚಿವರಾದ ಎಂಬಿ ಪಾಟೀಲ್, ಕೆಜೆ,ಜಾರ್ಜ್,ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಪ್ರಭಾಕರ್,ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದ ರಾಜು, ನಸೀರ್ ಅಹ್ಮದ್, ಪ್ರಸ್ ಕ್ಲಬ್ ನ ಅಧ್ಯಕ್ಷರಾದ ಶ್ರೀಧರ್, ಉಪಾಧ್ಯಕ್ಷ ಮೋಹನ್ ಕುಮಾರ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ ಬೆಳ್ಳಿತಟ್ಟೆ ಹಾಗೂ ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದರು.