ಬೆಂಗಳೂರು: ಪ್ರಸ್ ಕ್ಲಬ್ ಆಫ್ ಬೆಂಗಳೂರು ವತಿಯಿಂದ ರಾಜ್ಯ ಮಟ್ಟದ ವಿವಿಧ ಕ್ಷೇತ್ರಗಳ ಸಾಧಕರಿಗೆ “ಪ್ರೈಡ್ ಆಫ್ ಕನಾ೯ಟಕ” ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಭಾಗವಹಿಸಿ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಿದರು.
ಪ್ರಸ್ ಕ್ಲಬ್ ವತಿಯಿಂದ ರವಿ ಕಾಣದನ್ನು ಕವಿ ಕಂಡ ಎಂಬಂತೆ ಸಾಧಕರನ್ನು ಸರ್ಕಾರ ಮಾಡಬೇಕಾಗಿರುವ ಈ ಉತ್ತಮ ಕಾರ್ಯವನ್ನು ತಮ್ಮ ವತಿಯಿಂದ ಹಲವಾರು ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಗಣ್ಯರನ್ನು ಗುರುತಿಸಿ ಪ್ರೈಡ್ ಆಫ್ ಕರ್ನಾಟಕ ಪ್ರಶಸ್ತಿಯನ್ನು ನೀಡುತ್ತಿರುವುದು ಸಂತೋಷ ತಂದಿದ್ದು ಸಾಧಕರು ಇನ್ನಷ್ಟು ಸಾಧನೆ ಮಾಡಬೇಕೆಂದು ಸಚಿವರು ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೃಷಿ ಸಚಿವ ಚೆಲುವರಾಯಸ್ವಾಮಿ, ಹಾಗೂ ಪ್ರಸ್ ಕ್ಲಬ್ ಅಧ್ಯಕ್ಷರಾದ ಶ್ರೀಧರ್,ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ ಉಪಸ್ಥಿತರಿದ್ದರು.