ಬೆಂಗಳೂರು : ನಕಲಿ ಮರಣ ಪ್ರಮಾಣ ಪತ್ರ ಸೃಷ್ಟಿಸಿ ಆಸ್ತಿ ಕಬಳಿಸಲು ಸಂಚು ರೂಪಿಸಿದ್ದ ಸಬ್ ರಿಜಿಸ್ಟ್ರಾರ್ ಸೇರಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಬೆಂಗಳೂರಿನ ಆರ್ ಆರ್ ನಗರದ ಸಬ್ ರಿಜಿಸ್ಟ್ರಾರ್ ನವೀನ್, ಪುಟ್ಟಮ್ಮ, ಪ್ರಸಾದ್, ದಿವ್ಯಾ ಎಂದು ಗುರುತಿಸಲಾಗಿದೆ. ಒಟ್ಟು ಆರು ಮಂದಿ ಆರೋಪಿಗಳ ವಿರುದ್ಧ ಹಲಸೂರು ಗೇಟ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಆರೋಪಿಗಳ ಕೋಟ್ಯಾಂತರ ಮೌಲ್ಯದ 3 ಎಕರೆ ಖಾಸಗಿ ಜಮೀನು ಗುಳುಂ ಮಾಡಿದ್ದರು ಎಂಬ ಆರೋಪ ಕೇಳಿಬಂದಿದೆ.
ಟ್ರನ್ಕಕೋ ಇನ್ ಫ್ರಾ ಲಿಮಿಟೆಡ್ ಕಂಪನಿ ಹೆಸರಿನಲ್ಲಿ ವಂಚನೆ ಮಾಡಲಾಗಿದ್ದು, ಆರೋಪಿಗಳ ವಿರುದ್ಧ ದೂರು ದಾಖಲಾಗಿತ್ತು. ಸದ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.