ಬೆಳಗಾವಿ: ಪತ್ರಕರ್ತರೆಂದು ಹೇಳಿಕೊಂಡು ಗೂಡ್ಸ್ ಗಾಡಿ ಅಡ್ಡಗಟ್ಟಿ ವ್ಯಕ್ತಿ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಮಕನಮರಡಿ ಪೊಲೀಸರು ನಾಲ್ವರು ನಕಲಿ ಪತ್ರಕರ್ತರನ್ನು ಬಂಧಿಸಿದ್ದಾರೆ.
ಗುರುರಾಜ್ ಹುಕ್ಕೇರಿ ಎಂಬುವವರು ತಮ್ಮ ಗೂಡ್ಸ್ ವಾಹನದಲ್ಲಿ ಜೋಳದ ಪಿಡ್ಸ್ ಲೋಡ್ ಮಾಡಿಕೊಂಡು ಕೊನ್ನೂರಿನಿಂದ ಹೆಬ್ಬಾಳಕ್ಕೆ ಹೊರಟಾಗ ಟಾಟಾ ಇಂಡಿಗೋ ಕಾರ್ ಗಾಡಿ ಬಂದ ನಾಲ್ವರು ದುಷ್ಕರ್ಮಿಗಳು ಗೂಡ್ಸ್ ಗಾಡಿ ಅಡ್ಡಗಟ್ಟಿ ಬೆದರಿಕೆಯೊಡ್ದಿದ್ದಾರೆ.
ನಾವು ಪತ್ರಕರ್ತರು ಎಂದು ಹೇಳಿಕೊಂಡು ನಿಮ್ಮ ಗಾಡಿಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದೀರಿ ಅಂದು ಫುಡ್ ಇನ್ಸ್ಪೆಕ್ಟರ್ ಮತ್ತು ಪೊಲೀಸರಿಗೆ ದೂರು ಕೊಟ್ಟು ಗಾಡಿ ಶೀಜ್ ಮಾಡಿಸುತ್ತೇವೆ ಎಂದು ಅವಾಜ್ ಹಾಕಿದ್ದಲ್ಲದೇ ಅವಾಚ್ಯ ಶಬ್ಧಗಳಿಂದ ಬೈದು ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು.
ಈ ಹಿನ್ನೆಲೆಯಲ್ಲಿ ಗುರುರಾಜ್ ಶಿವಾನಂದ್ ಯಮಕನಮರಡಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಯಮಕನಮರಡಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಐಪಿಸಿ ಸೆಕ್ಷನ್ 506, 341, 384, 34, 506 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.