spot_img
spot_img
spot_img
18 C
Belagavi
Thursday, September 29, 2022
spot_img

ಬೆಳಗಾವಿ ಜಿಲ್ಲೆಯ ನಾಲ್ವರು ಕಾಯಕ ಬಂಧುಗಳಿಗೆ ಸನ್ಮಾನ

spot_img

ಬೆಳಗಾವಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬೆಂಗಳೂರಿನ ಪಂಚಾಯತರಾಜ್ ಆಯುಕ್ತಾಲಯದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಬುಧವಾರ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಮಹಿಳಾ ಕಾಯಕ ಬಂಧುಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಜಿಲ್ಲೆಯ ನಾಲ್ವರು ಕಾಯಕ ಬಂಧುಗಳನ್ನು ಸನ್ಮಾನಿಸಲಾಯಿತು.

ಯೋಜನೆಯಡಿ ಅತ್ಯುತ್ತಮವಾಗಿ ಕೆಲಸ ನಿರ್ವಹಿಸುವುದರ ಜೊತೆಗೆ ನೂರಾರು ಜನರಲ್ಲಿ ಜಾಗೃತಿ ಮೂಡಿಸಿ ಯೋಜನೆಯಡಿ ಕೂಲಿ ಕೆಲಸ ಪಡೆಯಲು ನೆರವಾದ ಹಿನ್ನೆಲೆಯಲ್ಲಿ ಜಿಲ್ಲೆಯ ಬೆಳಗಾವಿ ತಾಲೂಕಿನ ಹೊನಗಾ ಗ್ರಾಪಂ ವ್ಯಾಪ್ತಿಯ ಕಾಯಕ ಬಂಧು (ಮೇಟ್) ಸಂಗೀತಾ ಜೋಳನ್ನವರ್, ಖಾನಾಪೂರ ತಾಲೂಕಿನ ಮಂಗೇನಕೊಪ್ಪ ಗ್ರಾಪಂ ವ್ಯಾಪ್ತಿಯ ಸರಸ್ವತಿ ಚವಲಗಿ, ಚಿಕ್ಕೋಡಿ ತಾಲೂಕಿನ ಅಂಕಲಿಯ ಜಯಶ್ರೀ ಭೋಸಲೆ, ಹುಕ್ಕೇರಿ ತಾಲೂಕಿನ ಹೊಸೂರದ ಗೌರಿ ಬೇವಿನಕಟ್ಟಿ ಅವರನ್ನು ರಾಜ್ಯಮಟ್ಟದಲ್ಲಿ ಆಯ್ಕೆ ಮಾಡಿ ಸನ್ಮಾನಿಸಲಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಒಂದು ವಾರ ಕಾಲ (ಮಾ.7 ರಿಂದ 13) “ನವ ಭಾರತದ ನಾರಿ” ಹೆಸರಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಅದರ ಅಂಗವಾಗಿ ಕಾಯಕ ಬಂಧುಗಳನ್ನು ಸನ್ಮಾನಿಸಿ, ಗೌರವ ಸಮರ್ಪಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆಯ ಸಚಿವರಾದ ಕೆ.ಎಸ್. ಈಶ್ವರಪ್ಪ, ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ. ಅತೀಕ್, ಆಯುಕ್ತರಾದ ಶಿಲ್ಪಾ ನಾಗ್ ಅವರು ಎಲ್ಲ ಕಾಯಕ ಬಂಧುಗಳನ್ನು ಸತ್ಕರಿಸಿದರು. ಸನ್ಮಾನಕ್ಕೆ ಭಾಜನರಾದ ಜಿಲ್ಲೆಯ ಎಲ್ಲ ಕಾಯಕ ಬಂಧುಗಳಿಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಚ್.ವಿ. ದರ್ಶನ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -