ಮೈಸೂರು: ಸಿಎಂ ಆಗಿ ಮುಂದುವರಿಯುತ್ತೇನೆಂದು ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಸಿಎಂ ಅವರದ್ದು ವೈಯಕ್ತಿಕ ಅಭಿಪ್ರಾಯ. ಯಾರು ಮುಂದುವರಿಯಬೇಕೆಂದು ಹೈಕಮಾಂಡ್ ನಿರ್ಧರಿಸುತ್ತದೆ. ಒಂದು ವೇಳೆ ಹೈಕಮಾಂಡ್ ನೀನು ಸಿಎಂ ಆಗು ಅಂದರೆ ನಾನೂ ಸಿದ್ಧ ಎಂದಿದ್ದಾರೆ.
ಅಧಿಕಾರ ಹಂಚಿಕೆ ಬಗ್ಗೆ ದೆಹಲಿಯಲ್ಲಿ ನಾಲ್ವರು ಮಾತನಾಡಿದ್ದಾರೆ. ಅವರಿಗೆ ಮಾತ್ರ ಈ ವಿಚಾರದ ಬಗ್ಗೆ ಸ್ಪಷ್ಟತೆ ಇದೆ. ಎಲ್ಲರಿಗೂ ಅಭಿಪ್ರಾಯ ಹೇಳಲು ಸ್ವಾತಂತ್ರ್ಯವಿದೆ, ಇದರಲ್ಲಿ ತಪ್ಪಿಲ್ಲ ಎಂದರು.
ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....