spot_img
spot_img
spot_img
24.1 C
Belagavi
Friday, September 30, 2022
spot_img

ಬೆಳಗಾವಿ : ಯುವತಿಯ ಮೇಲೆ ಅತ್ಯಾಚಾರ ಎಸಗಿ, ಮದುವೆಯಾಗುವುದಾಗಿ ವಂಚನೆ

spot_img

ಬೆಳಗಾವಿ: ಯುವತಿಯ ಮೇಲೆ ಅತ್ಯಾಚಾರ ಎಸಗಿ ಬಳಿಕ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ ಎನ್ನಲಾದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ಬೆಳಕಿಗೆ ಬಂದಿದೆ.

ಗೋಕಾಕಿನ ಯುವಕ ಆದರ್ಶ ಮಾಲದಿನ್ನಿ ವಿರುದ್ಧ ಪ್ರೀತಿಸಿ, ಮದುವೆಯಾಗುವುದಾಗಿ ವಂಚಿಸಿದ ಆರೋಪ ಕೇಳಿ ಬಂದಿದೆ.

2016ರ ಡಿಸೆಂಬರ್ 5 ರಂದು ಯುವತಿಯನ್ನು ಮನೆಗೆ ಕರೆದು ಆದರ್ಶ, ಬಳಿಕ ಅತ್ಯಾಚಾರ ಎಸಗಿದ್ದಾನೆ. ಅಷ್ಟೇ ಅಲ್ಲದೆ, ದೃಶ್ಯವನ್ನು ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾನೆ ಎನ್ನಲಾಗಿದೆ.

ಇನ್ನು ಈ ಬಗ್ಗೆ ಯಾರಿಗಾದರೂ ಹೇಳಿದ್ರೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿಯೂ ಬೆದರಿಕೆ ಒಡ್ಡಿದ್ದಾನೆ. ಇನ್ನು ಸುಮ್ಮನಿರದ ಯುವತಿ ಪೊಲೀಸರಿಗೆ ದೂರು ನೀಡಲು ಮುಂದಾಗುತ್ತಿದ್ದಂತೆ ಮದುವೆಯಾಗುವುದಾಗಿ ನಂಬಿಸಿದ್ದಾನೆ

ಇನ್ನು ಈ ಬಗ್ಗೆ ಯುವಕ ಆದರ್ಶನ ತಂದೆ-ತಾಯಿ ಗಮನಕ್ಕೂ ‌ತಂದಿದ್ದಾಳೆ. ಇದಕ್ಕೆ ಕುಟುಂಬಸ್ಥರು ಯುವತಿಗೆ ಹಣದ ಆಸೆ ತೋರಿಸಿರುವ ಯುವಕನ, ಬಳಿಕ ಜೀವ ಬೆದರಿಕೆ ಹಾಕಿದ್ದಾರೆ ಎಂದು ನೊಂದ ಯುವತಿ ಆರೋಪಿಸಿದ್ದಾಳೆ.

ಇನ್ನು ಯುವಕ ಆದರ್ಶ, ಬೇರೆ ಯುವತಿ ಜೊತೆಗೆ ನಾಳೆ ಮದುವೆಯಾಗುತ್ತಿದ್ದಾನೆ. ಇದರಿಂದ ನೊಂದ ಯುವತಿ ನ್ಯಾಯ ಕೊಡಿಸಿ ಎಂದು ಬೆಳಗಾವಿ ಎಸ್.ಪಿ ಮೊರೆ ಹೋಗಿದ್ದಾಳೆ.

spot_img

Related News

ರಾಜ್ಯಕ್ಕೆ ರಾಹುಲ್ ಗಾಂಧಿ ಆಗಮನ

ಚಾಮರಾಜನಗರ : ದೇಶಾದ್ಯಂತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರ ಮಾಡಿಕೊಂಡಿದ್ದಾರೆ. ರಾಹುಲ್ ಗಾಂಧಿ ಅವರನ್ನು...

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -