spot_img
spot_img
spot_img
18 C
Belagavi
Thursday, September 29, 2022
spot_img

ಫೆ. 23 ರಂದು ಬೆಳಗಾವಿಯಲ್ಲಿ ಶಾಲಾ ಕಾಲೇಜುಗಳಿಗೆ ಉಚಿತ ಪುಸ್ತಕ ವಿತರಣೆ

spot_img

ಬೆಳಗಾವಿ : ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ವತಿಯಿಂದ ಶಾಲಾ ಕಾಲೇಜುಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಫೆಬ್ರವರಿ 23 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕುಮಾರ ಗಂಧರ್ವ ಕಲಾಮಂದಿರದ ಆವರಣದಲ್ಲಿರುವ ಬಸವರಾಜ ಕಟ್ಟಿಮನಿ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಉದ್ಘಾಟನೆ ಮತ್ತು ಉಚಿತ ಪುಸ್ತಕಗಳ ವಿತರಣೆಯನ್ನು ಖ್ಯಾತ ಲೇಖಕರು ಹಾಗೂ ರಂಗಕರ್ಮಿ ಡಾ. ರಾಮಕೃಷ್ಣ ಮರಾಠ ಅವರು ನೆರವೇರಿಸುವರು. ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷರಾದ ಡಾ.ಎಂ.ಎನ್. ನಂದೀಶ್ ಹಂಚೆ ಅವರು ಅಧ್ಯಕ್ಷತೆಯನ್ನು ವಹಿಸುವವರು.

ಮುಖ್ಯ ಅತಿಥಿಗಳಾಗಿ ಖ್ಯಾತ ಲೇಖಕರಾದ ಡಾ. ಸರಜೂ ಕಾಟ್ಕರ್ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರ ಸದಸ್ಯ ಅಶೋಕ್ ರಾಯ್ಕರ್ ಉಪಸ್ಥಿತರಿರವರು.

ಕನ್ನಡ ಪುಸ್ತಕ ಪ್ರಾಧಿಕಾರ ಆಡಳಿತಾಧಿಕಾರಿ ಕೆ.ಬಿ, ಕಿರಣ್ ಸಿಂಗ್ ಹಾಗೂ ಸದಸ್ಯರಾದ ಪ್ರೊ ಎ.ವಿ.ನಾವಡ, ಡಾ.ಆರ್.ಬಿ.ಗದ್ದಗಿಮಠ, ಪ್ರಕಾಶ್ ಕಂಬತ್ತಳ್ಳಿ, ಐ.ಎ.ಎನ್.ಖಂಡಿಗೆ,ಡಾ. ಎಂ.ಪುರುಷೋತ್ತಮ ಗೌಡ, ಸಂಗಮೇಶ್ ಪೂಜಾರ್ ಉಪಸ್ಥಿತರಿರವರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -