spot_img
spot_img
spot_img
spot_img
spot_img
spot_img
spot_img
spot_img
spot_img
26.1 C
Belagavi
Friday, September 22, 2023
spot_img

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಜೂನ್‌ 1 ರಂದು ಮುಖ್ಯಮಂತ್ರಿಗಳು ಅಧಿಕೃತವಾಗಿ ಘೋಷಣೆ: ರಾಮಲಿಂಗಾರೆಡ್ಡಿ

ಬೆಂಗಳೂರು: ಕಾಂಗ್ರೆಸ್‌ ಗ್ಯಾರಂಟಿಗಳಲ್ಲಿ ಒಂದಾದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಅನುಷ್ಠಾನಕ್ಕೆ ಬರುವುದರಲ್ಲಿ ಯಾವುದೇ ಅನುಮಾನ ಇಲ್ಲ. ಜೂನ್‌ 1 ರಂದು ಮುಖ್ಯಮಂತ್ರಿಗಳು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎಂದು ನೂತನ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಸಾರಿಗೆ ಇಲಾಖೆ ಅಧಿಕಾರಿಗಳು ಮೂರ್ನಾಲ್ಕು ಆಯ್ಕೆಗಳನ್ನ ಕೊಟ್ಟಿದ್ದಾರೆ. ಎಲ್ಲಾ ಮಹಿಳೆಯರಿಗೆ ಉಚಿತ ಎನ್ನುವುದು ಕಾಂಗ್ರೆಸ್‌ ಸರ್ಕಾರದ ಪ್ರಣಾಳಿಕೆಯಾಗಿತ್ತು. ನಾಳೆ ಸಚಿವ ಸಂಪುಟದಲ್ಲಿ ಸಾರಿಗೆ ಇಲಾಖೆ ವರದಿ ಕೊಡುತ್ತೇವೆ. ಉಚಿತ ಬಸ್‌ ಪ್ರಯಾಣ ಗ್ಯಾರಂಟಿ ಜಾರಿಗೆ ಬರೋದ್ರಲ್ಲಿ ಅನುಮಾನವೇ ಇಲ್ಲ ಎಂದು ತಿಳಿಸಿದ್ದಾರೆ. ಮಂಗಳವಾರ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ನಿಗಮದ ಪ್ರಯಾಣಿಕರ ಸಂಖ್ಯೆ, ಬಸ್‌ಗಳ ಸಂಖ್ಯೆ ವಾರ್ಷಿಕ ಆದಾಯದ ಬಗ್ಗೆ ಸಮಗ್ರ ಮಾಹಿತಿ ಪಡೆದರು.

ಮಹಿಳೆಯರಿಗೆ ಉಚಿತ ಬಸ್ ಸೇವೆ ವಿಚಾರ ಕುರಿತು ಮಾತನಾಡುವಾಗ, ಪ್ರತಿ ವರ್ಷ ಅಂದಾಜು 3,200 ಕೋಟಿ ರೂ. ಖರ್ಚು ಬೇಕಾಗುತ್ತದೆ. ಸಾರಿಗೆ 4 ನಿಗಮ ನಷ್ಟದಲ್ಲಿವೆ. ಹಾಗಾಗಿ ಸರ್ಕಾರ ಸಹಾಯಧನ ನೀಡಿದರೆ ಯೋಜನೆ ಜಾರಿಗೆ ಅನುಕೂಲವಾಗುತ್ತದೆ. ಕೊರೊನಾ ಸಂದರ್ಭದಲ್ಲಿ ದೊಡ್ಡ ಮಟ್ಟದಲ್ಲಿ ನಷ್ಟ ಉಂಟಾಗಿತ್ತು. ಅದನ್ನು ಸರಿದೂಗಿಸಲು ನಿಗಮದ ಕೆಲವು ಆಸ್ತಿಗಳನ್ನು ಅಡವಿಟ್ಟು ಸಾಲ ಪಡೆಯಲಾಗಿದೆ. ಈಗಾಗಲೇ ಹಲವು ನಿಗಮಗಳಿಂದ ಸಾವಿರಾರು ಕೋಟಿ ಹಣ ಬರಬೇಕಿದೆ ಎಂದರು. ಇದೇ ವೇಳೆ ಬಸ್‌ಗಳ ಮಾಹಿತಿ ಕೊಟ್ಟ ಅಧಿಕಾರಿಗಳು ಸಾಮಾನ್ಯ ಬಸ್‌ಗಳಲ್ಲಿ ಉಚಿತ ಬಸ್ ಸೇವೆ ಕಲ್ಪಿಸಿದರೆ ಆರ್ಥಿಕ ಹೊರೆಯಾಗಲಿದೆ ಎಂದು ಸಚಿವರಿಗೆ ಮನವರಿಕೆ ಮಾಡಿದರು.

ಬಳಿಕ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ನಮ್ಮ ನಾಲ್ಕು ಸಾರಿಗೆ ಸಂಸ್ಥೆಗಳಲ್ಲಿ 240 ಘಟಕಗಳಿದ್ದು, 21,574 ವಾಹನಗಳನ್ನ ಒಳಗೊಂಡಿದೆ. 4 ನಿಗಮಗಳಿಂದ ಒಟ್ಟು 82.51 ಲಕ್ಷ ಪ್ರಯಾಣಿಕರು ಪ್ರಯಾಣಿಸುತ್ತಿದ್ದಾರೆ. ಇದರೊಂದಿಗೆ ಈ ವರ್ಷ 4,500ಕ್ಕೂ ಹೆಚ್ಚು ಬಸ್‌ಗಳು ಸೇರ್ಪಡೆಯಾಗುತ್ತಿವೆ. ಇನ್ನಷ್ಟು ಹೊಸ ಬಸ್‌ಗಳು ಬರಬೇಕಿದೆ. ಇದರಿಂದ ಪ್ರತಿದಿನ 82.51 ಲಕ್ಷ ಪ್ರಯಾಣಿಕರು ಓಡಾಡಬಹುದು ಎಂದು ಮಾಹಿತಿ ನೀಡಿದ್ದಾರೆ.

Related News

ಬೆಳಗಾವಿ ಜಿಲ್ಲೆಯಲ್ಲಿ 14 ಗ್ರಾ.ಪಂಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ

ಬೆಳಗಾವಿ : 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೆಳಗಾವಿ ಜಿಲ್ಲೆಯ 14 ಗ್ರಾಮ ಪಂಚಾಯತಿಗಳು ಆಯ್ಕೆಯಾಗಿದ್ದು ಜಿಲ್ಲಾ ಪಂಚಾಯತ್ ಕಾರ್ಯಾಲಯ ಈ ಕುರಿತು ಆದೇಶ ನೀಡಿದೆ. ಖಾನಾಪುರ – ಬೇಕವಾಡ, ಕಿತ್ತೂರು –...

ಚಂದ್ರಯಾನ-3 ಮೇಲೆ ಇಸ್ರೋ ಕಣ್ಣು ಇಂದು ಎಚ್ಚೆತ್ತುಕ್ಕೊಳ್ಳುತ್ತಾ ಲ್ಯಾಂಡರ್ ಮತ್ತು ರೋವರ್

ಬೆಂಗಳೂರು: ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -