spot_img
spot_img
spot_img
21.1 C
Belagavi
Friday, September 30, 2022
spot_img

ಬೀದರನಲ್ಲಿ ಬಡವರ ಫ್ರಿಡ್ಜ್ ಗೆ ಫುಲ್ ಡಿಮ್ಯಾಂಡ್..!

spot_img

ವರದಿ : ಪರಮೇಶ.ಡಿ.ವಿಳಸಪೂರೆ

ಬೀದರ: ಕಲ್ಯಾಣ ಕರ್ನಾಟಕದ ಬಿಸಿಲು ನಾಡು ಬೀದರ ನಲ್ಲಿ ಏರುತ್ತಿರುವ ತಾಪಮಾನ, ಬಿಸಿಲಿಗೆ ನಿಟ್ಟುಸಿರು ಬಿಡುತ್ತಿರುವ ನಾಗರಿಕರು. ಜಿಲ್ಲೆಯಲ್ಲಿ ಈಗ ಬಿಸಿಲಿನ ಅಬ್ಬರ ಜೋರಾಗಿದೆ.ಬೆಳಗ್ಗೆಯಾದ್ರೆ ಸಾಕು ನೆತ್ತಿ ಸುಡುತ್ತಿದೆ. ಭೂಮಿಯ ಕಾವ ಹಂಚಿನಂತಾಗುತ್ತಿದ್ದು ಜನರು ಉಸ್ಸಪ್ಪ ಉಸ್ ಅಂತ ಉಸಿರು ಬಿಡುತ್ತಿದ್ದಾರೆ. ಈಗ್ಗೆ ಇಷ್ಟೊಂದುಬಿಸಿಲು ಇದ್ರೆ ಮುಂದ್ದೇಗೆ ಎಂಬ ಆತಂಕ ಜನರಲ್ಲಿ ಮನೆ ಮಾಡಿದೆ.

ಇತ್ತ ಬೀದರ ಜಿಲ್ಲೆಯಲ್ಲಿ ಬಿರು ಬಿಸಿಲು ಆರಂಭವಾಗುತ್ತಿದ್ದಂತೆ ಬಿಸಿಲೂರಲ್ಲಿ ‘ಬಡವರ ಫ್ರಿಡ್ಜ್’ ಎಂದೇ ಫೇಮಸ್ ಆಗಿರುವ ಮಣ್ಣಿನ ಮಡಿಕೆಗಳಿಗೆ ಎಲ್ಲಿಲ್ಲದ ಡಿಮ್ಯಾಂಡ್ ಬಂದಿದೆ. ಮನೆಯಲ್ಲಿ ಫ್ರಿಡ್ಜ್ ಇದ್ದರೂ ಬಡವರ ಫ್ರಿಡ್ಜ್ ಆಗಿರುವ ಮಣ್ಣಿನ ಮಡಿಕೆಯನ್ನು ಹೆಚ್ಚಾಗಿ ಖರೀದಿ ಮಾಡುತ್ತಿರುವ ದೃಶ್ಯ ಬೀದರ ನಗರದಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ನಗರದ ನೇಹರು ಸ್ಟೇಡಿಯಂ ಹತ್ತಿರ ಇರುವ ಮಣ್ಣಿನ ಮಡಿಕೆ ವ್ಯಾಪಾರ ಜೋರಾಗಿ ಸಾಗಿದೆ. ಆಧುನಿಕ ಶೈಲಿಯ

ಮಡಿಕೆಗಳಿಗೆ ದೇಸಿ ಟಚ್ ಕೊಟ್ಟು ಮಾರಾಟಕ್ಕೆ ಇಡಲಾಗಿದ್ದು ಜನರು ಖರೀದಿಯಲ್ಲಿ ತೊಡಗಿದ್ದಾರೆ. ಬೇಸಿಗೆ ದಾಹ ನೀಗಿಸುವ ಮಣ್ಣಿನ ಮಡಿಕೆಗಳತ್ತ ಜನ ಮೊರೆ ಹೋಗಿದ್ದಾರೆ. ಬೀದರ ಜಿಲ್ಲೆಯಲ್ಲಿ ಬೇಸಿಗೆಯಲ್ಲಂತೂ ಇಲ್ಲಿ 40-45 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತದೆ.

ಹೀಗಾಗಿ ಬೀದರ ಜನ ಬೇಸಿಗೆ ತಾಪಕ್ಕೆ ಬೆಸತ್ತು ಮಣ್ಣಿನ ಮಡಿಕೆಯ ಮೊರೆ ಹೋಗಿದ್ದಾರೆ. ನಗರದ ಸುಪ್ರಸಿದ್ಧ ನೇಹರು ಸ್ಟೇಡಿಯಂ ಹತ್ತಿರ ಆಕರ್ಷಕ ಮಡಿಕೆಗಳನ್ನು ಮಾರಾಟಕ್ಕೆ ಇಡಲಾಗಿದೆ. ನಗರ

ಸೇರಿದಂತೆ ಸುತ್ತಲಿನ ಹಳ್ಳಿ ಜನರು ಇಲ್ಲಿಗೆ ಆಗಮಿಸಿ‌ ಮಡಿಕೆ ಖರೀದಿಸಿ ಕೊಂಡೊಯ್ಯುತ್ತಿದ್ದಾರೆ. ಈ ವರ್ಷ ಬೇಸಿಗೆ ಆರಂಭವಾಗುತ್ತಿದ್ದಂತೆ ಮಡಿಕೆ ವ್ಯಾಪಾರ ಕುಂಬಾರರ ಕೈ ಹಿಡಿದಿದೆ. ಆದರೆ, ಮಡಿಕೆ ತಯಾರಿಸಲು ಕುಂಬಾರರಿಗೆ

ಮಣ್ಣಿನ ಕೊರತೆಯಿದೆ. ಬೇರೆ ಕಡೆಯಿಂದ ಮಣ್ಣಿನ ಮಡಿಕೆ ಹಾಗೂ ಮಣ್ಣಿನಿಂದ ತಯಾರಾದ ಅಡಿಗೆ ಪಾತ್ರೆಗಳನ್ನು ತಂದು ಮಾರಾಟ ಮಾಡಬೇಕಾದಅನಿವಾರ್ಯತೆ ಎದುರಾಗಿದೆ.

ಕೋವಿಡ್ ಹಿನ್ನೆಲೆ ಉಂಟಾದ ಪರಿಣಾಮದಿಂದ ನಾವು ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಸರ್ಕಾರನಮ್ಮ ಸಹಾಯಕ್ಕೆ ಬರಬೇಕಿದೆ ಎಂದು ಕುಂಬಾರರು, ಮಡಿಕೆ ವ್ಯಾಪಾರಿಗಳು ಮನವಿ ಮಾಡಿದ್ದಾರೆ. ಗುಜರಾತ್ ಹಾಗೂ ಮಹಾರಾಷ್ಟ್ರ ಸೇರಿದಂತೆ ಬೇರೆ ರಾಜ್ಯಗಳಿಂದ ಆಕರ್ಷಕ ಮಣ್ಣಿನ ಮಡಿಕೆಗಳನ್ನು ತಂದು ಮಾರಾಟ ಮಾಡಲಾಗುತ್ತಿದೆ.

ಅಲ್ಲದೇ ವಾಟರ್ ಬಾಟಲ್, ಮಣ್ಣಿನಿಂದ ತಯಾರಿಸಿದ ಅಡುಗೆ ಪಾತ್ರಗಳನ್ನು ಸಹ ಮಾರಾಟಕ್ಕೆ ಇಟ್ಟಿದ್ದಾರೆ. ಗಾತ್ರದ ಆಧಾರದ ಮೇಲೆ 100 ರಿಂದ 420 ರವರೆಗೆ ಮಣ್ಣಿನಮ ಡಿಕೆಗಳಿಗೆ ದರ ನಿಗದಿ ಮಾಡಲಾಗಿದೆ. ಸದ್ಯ ದಿನಕ್ಕೆ 20 ರಿಂದ 30 ಮಡಿಕೆಗಳು ಮಾರಾಟವಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ವ್ಯಾಪಾರವಾಗುವ ನಿರೀಕ್ಷೆಯಿದೆ ಎನ್ನುತ್ತಾರೆ.

ಆಧುನಿಕ ಯಂತ್ರೋಪಕರಣಗಳಿಗೆ ಮೊರೆ ಹೋಗಿ ಆರೋಗ್ಯ ಹಾಳು ಮಾಡಿಕೊಳ್ಳುವ ಬದುಲು ಕಡಿಮೆ ಖರ್ಚಿನಲ್ಲಿ ಪರಿಸರ ಪ್ರಿಯಮಡಿಕೆಯಲ್ಲಿ ನೀರು ಶೇಖರಣೆ ಮಾಡಿ ಕುಡಿಯುವುದು ಹಾಗೂ ಮಣ್ಣಿನ ಪಾತ್ರೆಯಲ್ಲಿ ಅಡುಗೆ ಬೇಯಿಸಿಕೊಂಡು ಸೇವಿಸುವುದರಿಂದ ಆರೋಗ್ಯದ ಮೇಲೆ ಯಾವುದೇ ದುಷ್ಪರಿಣಾಮ ಬೀರುವುದಿಲ್ಲ. ಹೀಗಾಗಿಯೇ ಆರೋಗ್ಯದ ಹಿತದೃಷ್ಟಿಯಿಂಲೇ ಮಣ್ಣಿನ ವಸ್ತುಗಳಿಗೆ ಬೇಡಿಕೆ ಹೆಚ್ಚಾಗಿದೆ ಎಂಬ ಅಭಿಪ್ರಾಯ ಸಾರ್ವಜನಿಕರದಾಗಿದೆ.

ಮಹಾಮಾರಿ ಕೊರೊನಾ ನಂತರದ ದಿನಗಳಲ್ಲಿ ಬೇಸಿಗೆ ಆರಂಭವಾಗುತ್ತಿದ್ದಂತೆ ಬೀದರ ಜಿಲ್ಲೆಯಲ್ಲಿ ಮಡಿಕೆ ವ್ಯಾಪಾರ ಗರಿಗೆದರಿದ್ದು, ಕುಂಬಾರರ ಮೊಗದಲ್ಲಿ ಮಂದಹಾಸ ಮೂಡಿದ್ದಂತೂ ಸತ್ಯ.

spot_img

Related News

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -