spot_img
spot_img
spot_img
18 C
Belagavi
Thursday, September 29, 2022
spot_img

ಬಜೆಟ್​ನಲ್ಲಿ ಘೋಷಣೆಯಾದ ಹೊಸ ಯೋಜನೆಗಳ ಸಂಪೂರ್ಣ ವಿವರ

spot_img

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಚೊಚ್ಚಲ ಬಜೆಟ್ ಅನ್ನು ಸಮರ್ಪಕವಾಗಿ ಮಂಡಿಸಿದ್ದಾರೆ. ಇನ್ನು 2022-23ನೇ ಸಾಲಿನ ಹಲವಾರು ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ. ಅವುಗಳ ಸಂಪೂರ್ಣ ವಿವರ ಈ ಕೆಳಗಿನಂತಿವೆ.

 • ರೈತ ಶಕ್ತಿ ನೂತನ ಯೋಜನೆಯಡಿ ಕೃಷಿ ಯಂತ್ರೋಪಕರಣಗಳ ಬಳಕೆ ಉತ್ತೇಜನಕ್ಕೆ ಪ್ರತಿ ಎಕರೆಗೆ 250 ರೂ.ಗಳಂತೆ ಡೀಸೆಲ್ ಸಹಾಯಧನ
 • ಕೆಪೆಕ್ ಮೂಲಕ ಕೃಷಿ ಉತ್ಪನ್ನಗಳ ಕೊಯ್ಲಿನೋತ್ತರ ನಿರ್ವಹಣೆ, ಮಾರಾಟ ಮತ್ತು ರಫ್ತು ಮಾಡಲು 50 ಕೋಟಿ ರೂ. ಹಂಚಿಕೆ.
 • ಎಲ್ಲಾ ಜಿಲ್ಲೆಗಳಲ್ಲಿ ಮಿನಿ ಆಹಾರ ಪಾರ್ಕ್ ಸ್ಥಾಪನೆ.ದ್ರಾಕ್ಷಿ ಬೆಳೆ ಸಂಗ್ರಹಣೆ, ಸಂಸ್ಕರಣೆ ಮತ್ತು ಸಾಗಾಣಿಕೆಗೆ ವಿಜಯಪುರ ಜಿಲ್ಲೆ,
 • ತೊರವಿಯಲ್ಲಿ 35 ಕೋಟಿ ರೂ. ವೆಚ್ಚದ ಅತ್ಯಾಧುನಿಕ ಶೈತ್ಯ ಸಂಗ್ರಹ ವ್ಯವಸ್ಥೆ ಸ್ಥಾಪನೆ ಹಾಗೂ ಶೀತಲೀಕೃತ ಸರಕು ಸಾಗಣೆ ವಾಹನ ಪೂರೈಕೆ.
 • 3 ಲಕ್ಷ ಹೊಸ ರೈತರೂ ಸೇರಿದಂತೆ 33 ಲಕ್ಷ ರೈತರಿಗೆ 24,000 ಕೋಟಿ ಸಾಲ ವಿತರಣೆ ಗುರಿ.
 • ರೈತರಿಗೆ ಆರೋಗ್ಯ ಸೇವೆ ಒದಗಿಸಲು ಯಶಸ್ವಿನಿ ಯೋಜನೆ ಮರುಜಾರಿ-300 ಕೋಟಿ ರೂ. ಅನುದಾನ.
 • 57 ತಾಲ್ಲೂಕುಗಳಲ್ಲಿ 642 ಕೋಟಿ ರೂ. ವೆಚ್ಚದಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ-ಜಲಾನಯನ ಅಭಿವೃದ್ಧಿ ಘಟಕ-2.0 ಜಾರಿ.
 • ಬಳ್ಳಾರಿ ಜಿಲ್ಲೆಯ ಹಗರಿ ಹಾಗೂ ಬೆಳಗಾವಿ ಜಿಲ್ಲೆ, ಅಥಣಿಯಲ್ಲಿ ನೂತನ ಕೃಷಿ ಕಾಲೇಜು ಸ್ಥಾಪನೆ.
 • ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಪ್ರತಿ ಟನ್ ದ್ವಿತಳಿ ರೇಷ್ಮೆಗೂಡಿಗೆ 10 ಸಾವಿರ ರೂ. ಪ್ರೋತ್ಸಾಹ ಧನ
 • ದ್ವಿತಳಿ ಮೊಟ್ಟೆ ಉತ್ಪಾದಿಸಿ ಶೈತೀಕರಿಸಲು ಮದ್ದೂರು, ರಾಣೆಬೆನ್ನೂರು ಮತ್ತು ದೇವನಹಳ್ಳಿಯಲ್ಲಿ 15 ಕೋಟಿ ರೂ.ಗಳ ವೆಚ್ಚದಲ್ಲಿ ಶೈತ್ಯಾಗಾರ ನಿರ್ಮಾಣ.
 • ಕಲಬುರಗಿ ಮತ್ತು ಹಾವೇರಿ ಜಿಲ್ಲೆಯಲ್ಲಿ 30 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ.
 • ದ್ವಿತಳಿ ಬಿತ್ತನೆ ಗೂಡಿಗೆ ಪ್ರತಿ ಕೆಜಿಗೆ 50 ರೂ. ಪ್ರೋತ್ಸಾಹಧನ ಹೆಚ್ಚಳ; ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಪ್ರೋತ್ಸಾಹಧನ.
 • ಮಂಡ್ಯ ಜಿಲ್ಲೆ, ಕೆ.ಆರ್. ಪೇಟೆಯಲ್ಲಿ ರೇಷ್ಮೆ ತರಬೇತಿ ಕೇಂದ್ರ.
 • ನೂತನ 100 ಪಶುಚಿಕಿತ್ಸಾಲಯಗಳ ಪ್ರಾರಂಭ.
 • ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ನೀಡಲು ರಾಜ್ಯದಲ್ಲಿ ಮೊದಲ ಬಾರಿಗೆ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆ. ರಾಜ್ಯ ಸರ್ಕಾರದಿಂದ 100 ಕೋಟಿ ರೂ. ಷೇರು ಬಂಡವಾಳ.
 • ರಾಜ್ಯದಲ್ಲಿರುವ ಗೋಶಾಲೆಗಳ ಸಂಖ್ಯೆ 100ಕ್ಕೆ ಹೆಚ್ಚಳ; 50 ಕೋಟಿ ರೂ. ಅನುದಾನ.
 • ಗೋಶಾಲೆಗಳಲ್ಲಿನ ಗೋವುಗಳ ದತ್ತು ಪ್ರೋತ್ಸಾಹಕ್ಕೆ ರಾಜ್ಯದಲ್ಲಿ ಮೊದಲ ಬಾರಿಗೆ ಪುಣ್ಯಕೋಟಿ ದತ್ತು ಯೋಜನೆಗೆ ಚಾಲನೆ.
 • ಹಾವೇರಿಯಲ್ಲಿ ಮೆಗಾಡೈರಿ ಸ್ಥಾಪನೆ; ಶಿವಮೊಗ್ಗ, ದಾವಣಗೆರೆ-ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆ.
 • ಆಕಸ್ಮಿಕ ಮರಣ ಹೊಂದುವ ಕುರಿ/ ಮೇಕೆ ಸಾಕಾಣಿಕೆದಾರರು/ ವಲಸೆ ಕುರಿಗಾರರ ಕುಟುಂಬಕ್ಕೆ 5 ಲಕ್ಷ ರೂ. ವಿಮಾ ಸೌಲಭ್ಯ.
 • ಮೀನುಗಾರಿಕೆ ಉತ್ತೇಜನಕ್ಕೆ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಸಂಯೋಜನೆಯೊಂದಿಗೆ 100 ಆಳ ಸಮುದ್ರ ಮೀನುಗಾರಿಕಾ ಹಡಗುಗಳಿಗೆ ನೆರವು ನೀಡಲು ‘ಮತ್ಸ್ಯ ಸಿರಿ’ ಯೋಜನೆ ಜಾರಿ.
 • ನೀರಾವರಿ ಯೋಜನೆಗಳಿಗೆ ಅನುದಾನ
 • ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 – 5,000 ಕೋಟಿ ರೂ.
 • ಕಳಸಾ ಮತ್ತು ಬಂಡೂರಿ ನಾಲಾ ತಿರುವು ಯೋಜನೆ- 1,000 ಕೋಟಿ ರೂ.
 • ಭದ್ರಾ ಮೇಲ್ದಂಡೆ ಯೋಜನೆ- 3,000 ಕೋಟಿ ರೂ.
 • ಎತ್ತಿನಹೊಳೆ ಯೋಜನೆ – 3,000 ಕೋಟಿ ರೂ. ಅನುದಾನ.
 • ಮೇಕೆದಾಟು ಯೋಜನೆ- 1,000 ಕೋಟಿ ರೂ. ಅನುದಾನ.
 • ತುಂಗಭದ್ರಾ ಜಲಾಶಯದ ನೀರು ಸಂಗ್ರಹಣೆ ಕೊರತೆ ಸರಿದೂಗಿಸಲು ನವಲೆ ಬಳಿ ಸಮತೋಲನಾ ಜಲಾಶಯ ನಿರ್ಮಾಣಕ್ಕೆ 1,000 ಕೋಟಿ ರೂ. ಅನುದಾನ.
 • ಏತ ನೀರಾವರಿ ಯೋಜನೆ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-1 ಮತ್ತು 2ರಲ್ಲಿನ ಬೂದಿಹಾಳ ಪೀರಾಪುರ, ನಂದವಾಡಗಿ, ನಾರಾಯಣಪುರ ಬಲದಂಡೆ (9ಎ) ಕಾಲುವೆ ವಿಸ್ತರಣೆ ಯೋಜನೆ ಅನುಷ್ಠಾನಕ್ಕೆ ಕ್ರಮ.
 • 14 ನೀರಾವರಿ ಯೋಜನೆ ಪೂರ್ಣಗೊಳಿಸಿ, 35,319 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ.
 • 2021-22ನೇ ಸಾಲಿನಲ್ಲಿ ಅನುಮೋದಿಸಿದ 8,774 ಕೋಟಿ ರೂ.ಗಳ ಹೊಸ ನೀರಾವರಿ ಯೋಜನೆಗಳಿಗೆ ರೂಪುರೇಷೆ ಸಿದ್ಧಪಡಿಸಲು ಕ್ರಮ.
 • ನದಿಗಳಿಗೆ ಹಿಮ್ಮುಖವಾಗಿ ನುಗ್ಗುವ ಉಪ್ಪು ನೀರು ತಡೆಗಟ್ಟಲು ಖಾರ್‍ಲ್ಯಾಂಡ್ ಯೋಜನೆ ಅನುಷ್ಠಾನ. ಪ್ರಸ್ತುತ ಉತ್ತರ ಕನ್ನಡ ಜಿಲ್ಲೆಯಲ್ಲಿ ಜಾರಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿಯೂ ಅನುಷ್ಠಾನ.
 • ಕೆರೆಗಳ ಸಮಗ್ರ ಅಭಿವೃದ್ಧಿಗೆ 500 ಕೋಟಿ ರೂ. ಕ್ರಿಯಾ ಯೋಜನೆ. ಇದರಲ್ಲಿ ಪ್ರವಾಹದಿಂದ ಹಾನಿಯಾದ ಕೆರೆಗಳ ದುರಸ್ತಿಗೆ 200 ಕೋಟಿ ರೂ. ಅನುದಾನ.
 • ಕಾಳಿ ನದಿಯಿಂದ ನೀರನ್ನು ಬಳಸಿಕೊಂಡು, ಉತ್ತರ ಕರ್ನಾಟಕದ 5 ಜಿಲ್ಲೆಗಳಿಗೆ ಕುಡಿಯುವ ನೀರಿನ ಯೋಜನೆ ರೂಪಿಸಲು ಕ್ರಮ.
 • ತಾಲ್ಲೂಕುಗಳ ಸಮಗ್ರ ಅಭಿವೃದ್ಧಿಗೆ ಒಟ್ಟು 3,000 ಕೋಟಿ ರೂ. ಅನುದಾನ. 93 ತಾಲ್ಲೂಕುಗಳಲ್ಲಿ ಶಿಕ್ಷಣ ಗುಣಮಟ್ಟ ವೃದ್ಧಿ,
 • 100 ತಾಲ್ಲೂಕುಗಳಲ್ಲಿ ಆರೋಗ್ಯ ಸೇವೆ ಬಲಪಡಿಸಲು ಮತ್ತು 102 ತಾಲ್ಲೂಕುಗಳಲ್ಲಿ ಅಪೌಷ್ಟಿಕತೆ ನಿವಾರಣೆಗೆ ಕ್ರಮ.
 • 2 ವರ್ಷಗಳಲ್ಲಿ 100 ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿ 25 ಹಾಸಿಗೆಯ ಮಾದರಿ ಸಮುದಾಯ ಆರೋಗ್ಯ ಕೇಂದ್ರವಾಗಿ ತಲಾ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರದ ಉನ್ನತೀಕರಣ
 • 750 ಕೋಟಿ ರೂ. ವೆಚ್ಚದಲ್ಲಿ 100 ಡಾ. ಬಿ.ಆರ್. ಅಂಬೇಡ್ಕರ್ ವಿದ್ಯಾರ್ಥಿ ನಿಲಯ ಹಾಗೂ 10 ಕ್ರೈಸ್ ವಸತಿ ಶಾಲೆಗಳ ಕಟ್ಟಡಗಳ ನಿರ್ಮಾಣ.
 • 37 ಪೌಷ್ಟಿಕ ಪುನರ್ವಸತಿ ಕೇಂದ್ರಗಳ ಸ್ಥಾಪನೆ.
 • ತಾಲ್ಲೂಕುಗಳಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯೊಂದಿಗೆ ಸಂಯೋಜಿಸಿ 1,000 ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ 50 ಕೋಟಿ ರೂ. ಅನುದಾನ.
 • 165 ಕೋಟಿ ರೂ. ವೆಚ್ಚದಲ್ಲಿ ಬಾಡಿಗೆ ಕಟ್ಟಡಗಳಲ್ಲಿರುವ ಹಿಂದುಳಿದ ವರ್ಗಗಳ 50 ‘ಕನಕದಾಸ’ ವಿದ್ಯಾರ್ಥಿನಿಲಯಗಳಿಗೆ ಸುಸಜ್ಜಿತ ಕಟ್ಟಡ ನಿರ್ಮಾಣ.
 • ಅಪೌಷ್ಟಿಕತೆ ನಿವಾರಣೆಗೆ, ಸೃಷ್ಟಿ ಮತ್ತು ಕ್ಷೀರಭಾಗ್ಯ ಯೋಜನೆಯ ಸೌಲಭ್ಯ ಸಾಧಾರಣ ಅಪೌಷ್ಟಿಕ ಮಕ್ಕಳಿಗೂ ವಿಸ್ತರಣೆ.
spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -