spot_img
spot_img
spot_img
28.1 C
Belagavi
Thursday, September 29, 2022
spot_img

ಬೆಳಗಾವಿಯಲ್ಲಿ ಸಂಭ್ರಮದಿಂದ ಕೂಡಿದ ಗಣೇಶೋತ್ಸವ 

spot_img

ವರದಿ : ರತ್ನಾಕರ ಗೌಂಡಿ, ಬೆಳಗಾವಿ

ಬೆಳಗಾವಿ: ನಗರದಲ್ಲಿ ಎರಡು ವರ್ಷಗಳ ನಂತರ ಗಣೇಶೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದೆ.

ಬೆಳಗಾವಿ ಜನತೆಗೆ ಗಣೇಶ್ ಉತ್ಸವ ಒಂದು ವಿಶೇಷ ಹಬ್ಬವಾಗಿದ್ದು, ಎಲ್ಲಿ ಎಲ್ಲಾ ಸಮುದಾಯದ ಜನ ಸೇರಿ ಈ ಉತ್ಸವವನ್ನು ಆಚರಣೆ ಮಾಡುತ್ತಾರೆ. ಬೆಳಗಾವಿ ಗಣೇಶ್ ಉತ್ಸವ ತನ್ನದೇ ಆದ ಇತಿಹಾಸವನ್ನು ಹೊಂದಿದೆ.

1906ರಲ್ಲಿ ಸ್ವತಂತ್ರ ಹೋರಾಟಗಾರರಾದ ಬಾಲ್ ಗಂಗಾಧರ್ ತಿಲಕ್ ಅವರು ಸ್ವತಂತ್ರದ ಸಂಗ್ರಾಮದಲ್ಲಿ ಸಾರ್ವಜನಿಕರು ಭಾಗವಹಿಸಲು ಮತ್ತು ದೇಶವನ್ನು ಸ್ವಾತಂತ್ರ್ಯಗೊಳಿಸಲು ಧಾರ್ಮಿಕ ಆಚರಣೆ ಮತ್ತು ಹಬ್ಬಗಳಿಂದ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಹಮ್ಮಿಕೊಂಡು ಅದರ ಅಂಗವಾಗಿ ಬೆಳಗಾವಿಯಲ್ಲಿ ಗಣೇಶ್ ಉತ್ಸವ ಪ್ರಾರಂಭಿಸಿದರು.

ಈಗ 125 ವರ್ಷಗಳ ಕಳೆದು ತನ್ನ ಇತಿಹಾಸ ಪ್ರದರ್ಶನ ಮಾಡುತ್ತಾ ಇದೆ. ಈ ಸಂದರ್ಭದಲ್ಲಿ ಬೆಳಗಾವಿ ಪ್ರತಿ ಗಲ್ಲಿಗಳಲ್ಲಿ ಸಾರ್ವಜನಿಕ ಗಣಪತಿ ಮಂಟಪಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಹತ್ತು ದಿನಗಳ ಕಾಲವರೆಗೆ ಈ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಣೆ ಮಾಡುತ್ತಾ ಇದ್ದಾರೆ.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ವಾಡ್೯ ನಂ 44 ಸೇವಕರಾದ ಶ್ರೇಯಸ್ ನಕಾಡಿ ಅವರು ಪಂಚಾಯತ ಸ್ವರಾಜ್ ಸಮಾಚಾರ ಸುದ್ದಿ ವಾಹಿನಿ ಜೊತೆ ಮಾತನಾಡಿ,

ಶಾಹೂ ನಗರ ಗಣೇಶ್ ಉತ್ಸವ ಮಂಡಲ್ ವತಿಯಿಂದ ಮಹಾಪ್ರಸಾದ್ ಮತ್ತು ಸತ್ಯನಾರಾಯಣ ಪೂಜೆ ಹಮ್ಮಿಕೊಳ್ಳಲಾಗಿದೆ. ಜೊತೆಗೆ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ಈ ಸಂದರ್ಭದಲ್ಲಿ ಜರುಗಲಿವೆ ಎಂದು ಮಾಹಿತಿ ನೀಡಿದರು. ಈ ಹಬ್ಬ ಬೆಳಗಾವಿ ನಗರದ ಜನತೆಗೆ ವಿಶಿಷ್ಟವಾಗಿದೆ ಎಂದರು.

 

spot_img

Related News

ಮೋದಿ ಅವರ ನೇತೃತ್ವದಲ್ಲಿ 150 ಸ್ಥಾನಗಳ ಗೆಲುವ ಪಣ : ಯಡಿಯೂರಪ್ಪ 

ಶಿವಮೊಗ್ಗ: ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲುವ ಪಣ ಹೊಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರ ನೇತೃತ್ವದಲ್ಲಿ ದೇಶ...

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -