spot_img
22.9 C
Belagavi
Saturday, December 3, 2022
spot_img

ಪ್ರಥಮ ದರ್ಜೆ ಕಾಲೇಜು ಬೋಧಕರ ವರ್ಗಾವಣೆ ಸರ್ಕಾರ ಗ್ರೀನ್ ಸಿಗ್ನಲ್ 

ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆಯನ್ನು ಗಣಕೀಕೃತ ಕೌನ್ಸಿಲಿಂಗ್ ಮೂಲಕ ನಡೆಸೋದಕ್ಕೆ ಅನುಮತಿ ನೀಡಿದೆ. ಈ ಮೂಲಕ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಬೋಧಕರಿಗೆ ಸಿಹಿಸುದ್ದಿ ನೀಡಿದೆ.

ಈ ಕುರಿತಂತೆ ಕಾಲೇಜು ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಪ್ರತಿ ವರ್ಷ ಕೌನ್ಸೆಲಿಂಗ್ ಮೂಲಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿರುತ್ತದೆ.

ವಿವಿಧ ಕಾರಣಗಳಿಂದಾಗಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಬೋಧಕರ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಳ್ಳದಿರುವುದರಿಂದ ಹಲವಾರು ಮನವಿಗಳು ಸರ್ಕಾರಕ್ಕೆ ಸ್ವೀಕೃತವಾಗಿದೆ ಎಂದು ಹೇಳಿದೆ.

ರಾಜ್ಯ ಸರ್ಕಾರಕ್ಕೆ ವರ್ಗಾವಣೆಗಾಗಿ ಸಲ್ಲಿಕೆಯಾದಂತ ಮನವಿಗಳ ಹಿನ್ನಲೆಯಲ್ಲಿ, ಆಯುಕ್ತಾಲಯದ ಪ್ರಸ್ತಾವನೆಯಂತೆ ನವೆಂಬರ್-ಡಿಸೆಂಬರ್ ತಿಂಗಳಿನಲ್ಲಿ ಗಣಕೀಕೃತ ಕೌನ್ಸಿಲಿಂಗ್ ಆಧಾರದ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಲು ರಾಜ್ಯ ಸರ್ಕಾರ ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Related News

50 ಲಕ್ಷ ರೂ,ಗಳ ವೆಚ್ಚದಲ್ಲಿ ಮಂಡೋಳಿ ಗ್ರಾಮದ ರಸ್ತೆಗಳ ಅಭಿವೃದ್ಧಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಂಡೋಳಿ ಗ್ರಾಮದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಗಣಿ ನಿಧಿಯ ವತಿಯಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು 50 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿದ್ದು, ಶನಿವಾರ...

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮುಂದುವರಿದ ಅಭಿವೃದ್ಧಿ ಯೋಜನೆಗಳ ಸರಣಿ

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಲ್ಲೆಹೋಳ ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 60 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಶನಿವಾರ ಕಾಂಕ್ರೀಟ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -