ಬೆಂಗಳೂರು : ಕಬ್ಬು ಬೆಳೆಗಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಪ್ರತಿ ಮೆಟ್ರಿಕ್ ಟನ್ ಗೆ 50 ರೂ.ಹೆಚ್ಚುವರಿ ಪಾವತಿಗೆ ಸರ್ಕಾರ ಆದೇಶ ಹೊರಡಿಸಿದೆ.
ವಿವಿಧ ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ಬಾಗಲಕೋಟೆ ಸೇರಿ ಹಲವು ಕಡೆ ಕಬ್ಬು ಬೆಳೆಗಾರರು ಭಾರೀ ಪ್ರತಿಭಟನೆ ನಡೆಸಿದ್ದರು.
ಈ ಹಿನ್ನೆಲೆ ರೈತರ ಹೋರಾಟಕ್ಕೆ ಸ್ಪಂದಿಸಿದ ಸರ್ಕಾರ ನಿರ್ಧಾರ ಕೈಗೊಂಡಿದೆ. ಡಿಸೆಂಬರ್ 5 ರಂದು ಕಬ್ಬು ನಿಯಂತ್ರಣ ಮಂಡಳಿ ಸಭೆಯಲ್ಲಿ ಪ್ರತಿ ಮೆಟ್ರಿಕ್ ಟನ್ ಗೆ 50 ರೂ ಹೆಚ್ಚುವರಿಯಾಗಿ ಪಾವತಿಸಬೇಕು ಎಂದು ಸಕ್ಕರೆ ಸಚಿವ ಶಂಕರ್ ಪಾಟೀಲ್ ಘೋಷಣೆ ಮಾಡಿದ್ದರು.
ಇತ್ತೀಚೆಗೆ ವಿಕಾಸಸೌಧದಲ್ಲಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ನೇತೃತ್ವದಲ್ಲಿ ಕಬ್ಬು ನಿಯಂತ್ರಣ ಮಂಡಳಿ ಸಭೆ ನಡೆದಿದ್ದು, ಎಫ್‌ಆರ್ ಪಿ ದರ ಪಾವತಿ ಬಳಿಕ ಪ್ರತಿ ಟನ್ ಗೆ ಹೆಚ್ಚುವರಿಯಾಗಿ 50 ರೂ ನಂತೆ ಒಟ್ಟು 204.47 ಕೋಟಿ ಬಿಡುಗಡೆ ಮಾಡಿದೆ. ಈ ಬಗ್ಗೆ ಆದೇಶ ಹೊರಡಿಸುವಂತೆ ಕಬ್ಬು ಅಭಿವೃದ್ದಿ ಆಯುಕ್ತರಿಗೆ ಸಚಿವರು ಸೂಚನೆ ನೀಡಿದ್ದರು.