ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಹಸಿರು ನಿಶಾನೆ ತೋರಿಸಿದೆ. 3 ದಿನ ಗಣೇಶ ಕೂರಿಸಲು ಅನುಮತಿ ನೀಡಿದೆ.
ಈ ಹಿನ್ನೆಲೆಯಲ್ಲಿ ಈದ್ಗಾ ಮೈದಾನದಲ್ಲಿ ಗಣೇಶ ಕೂರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಗಣೇಶ ಪ್ರತಿಷ್ಠಾಪನೆಗಾಗಿ 6 ಹಿಂದುಪರ ಸಂಘಟನೆಗಳು ಮನವಿ ಸಲ್ಲಿಸಿದ್ದವು.
ಸಮಿತಿ ಗಣೇಶ ಪ್ರತಿಷ್ಠಾಪನೆ ಅವಕಾಶ ಮಾಡಿಕೊಡುವಂತೆ ವರದಿ ನೀಡಿತ್ತು. 6 ಸಂಘಟನೆಗಳಲ್ಲಿ ಒಂದು ಸಂಘಟನೆಗೆ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ. ಮೂರು ದಿನಗಳ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ ಎಂದು ಹುಬ್ಬಳ್ಳಿ ಮೇಯರ್ ಈರೇಶ್ ಅಂಚಟಗೇರಿ ತಿಳಿಸಿದ್ಧಾರೆ.