spot_img
spot_img
spot_img
21.1 C
Belagavi
Friday, September 30, 2022
spot_img

15 ಸಾವಿರ ಶಿಕ್ಷಕರ ನೇಮಕಾತಿಗೆ ಗ್ರೀನ್ ಸಿಗ್ನಲ್

spot_img

ಬೆಂಗಳೂರು: ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಹಾಕಲು ಕಾಯ್ತಿದ್ದವರಿಗೆ ಸಚಿವ ಬಿ.ಸಿ ನಾಗೇಶ್ ಗುಡ್ ನ್ಯೂಸ್ ಕೊಟ್ಟಿದ್ದಾರೆ.ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಕುರಿತಾಗಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಆದೇಶ ಹೊರಡಿಸಿದ್ದುಸೋಮವಾರವೇ ರಾಜ್ಯ ಸರ್ಕಾರದಿಂದ 15,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಬಿ.ಸಿ ನಾಗೇಶ್, 1-8ನೇ ತರಗತಿವರೆಗೆ 36 ಸಾವಿರ ಶಿಕ್ಷಕರ ಕೊರತೆಯಿದ್ದು, ಹೈದರಾಬಾದ್-ಕರ್ನಾಟಕ ಭಾಗಕ್ಕೆ 5000 ಹುದ್ದೆಗಳ ನೇಮಕಾತಿ ಮೀಸಲಿಡಲಾಗಿದ್ದು, ಈ ಬಾರಿ ಮಂಗಳಮುಖಿಯರಿಗೆ ವಿಶೇಷವಾಗಿ ಶೇಕಡಾ 1% ರಿಸರ್ವೇಷನ್ ಕೂಡ ಇರಲಿದೆ.

ಉಳಿದೆಡೆ 10,000 ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದರು. ಅಭ್ಯರ್ಥಿಗಳು ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಇದೇ ತಿಂಗಳು 23ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್ 22ಕ್ಕೆ ಅರ್ಜಿ ಸಲ್ಲಿಕೆಗೆ ಕೊನೆ ದಿನವಾಗಿದೆ. ಮೇ 21 ಹಾಗೂ 22ರ ಹುದ್ದೆಗೆ ಪರೀಕ್ಷೆ ನಡೆಯಲಿದೆ.ಇನ್ನು ಎಂಜಿನಿಯರಿಂಗ್ ಪದವೀಧರ ವಿದ್ಯಾರ್ಥಿಗಳು ಕೂಡ ಗಣಿತ ಶಿಕ್ಷಕ ನೇಮಕಾತಿ ಪರೀಕ್ಷೆ ಬರೆಯಬಹುದು ಎಂದು ಸಚಿವರು ತಿಳಿಸಿದರು.

spot_img

Related News

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -