ಹಿಂದಿನ ಸರ್ಕಾರದ ವಿದ್ಯುತ್ ದರ ಏರಿಕೆ ಆದೇಶ ಜಾರಿಯಾಗಿದೆ. ಕೆಇಆರ್ಸಿ ಒಮ್ಮೆ ಆದೇಶ ಮಾಡಿದರೆ ಹಿಂಪಡೆಯಲು ಆಗುವುದಿಲ್ಲ ಎಂದು ವಿಧಾನಸೌಧದಲ್ಲಿ ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಕೆಇಆರ್ಸಿ ಕಾಯ್ದೆ ಕೇಂದ್ರ ಸರ್ಕಾರದ ಅಧೀನದಲ್ಲಿದೆ. ವಿದ್ಯುತ್ ಏರಿಕೆ ವಿಚಾರವನ್ನು ಕೇವಲ ಅಧಿಕಾರಿಗಳು ನಿರ್ಧರಿಸುವುದಿಲ್ಲ. ಸಿಎಂ, ಇಂಧನ ಇಲಾಖೆ ಸಚಿವರು ಸಭೆ ನಡೆಸಿ ನಿರ್ಧಾರ ಕೈಗೊಳ್ತಾರೆ. ನಾವು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಕೆಇಆರ್ಸಿ ಮೇಲೆ ಹಾಕಲ್ಲ.
ಹಿಂದಿನ ಬಿಲ್ ಪಾವತಿಸಲು ಗ್ರಾಹಕರಿಗೆ 3 ತಿಂಗಳ ಕಾಲಾವಕಾಶವಿದೆ. ಗೃಹಜ್ಯೋತಿ ಯೋಜನೆ ಅಡಿ ಹೊಸ ಮನೆಗಳಿಗೆ 53 ಯೂನಿಟ್ ಉಚಿತ. ಗೃಹಜ್ಯೋತಿ ಜಾರಿ ಹೊರೆಯನ್ನು ಗ್ರಾಹಕರ ಮೇಲೆ ಹಾಕುವುದಿಲ್ಲ. ಗೃಹಜ್ಯೋತಿ ಯೋಜನೆ ವೆಚ್ಚವನ್ನು ರಾಜ್ಯ ಸರ್ಕಾವೇ ಭರಿಸಲಿದೆ ಎಂದು ವಿಧಾನಸೌಧದಲ್ಲಿ ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ಬೆಳಗಾವಿ: 10 ದಿನಗಳ ಗಣಪತಿ ಭಕ್ತರ ಆತಿತ್ಯವನ್ನು ಸ್ವೀಕರಿಸಿ ಇಂದು ನಿರ್ಗಮನ ವಾಗುತ್ತಿದ್ದಾನೆ. ಗಣಪತಿ ಭಕ್ತರು ಹತ್ತು ದಿನಗಳವರೆಗೆ ವಿವಿಧ ಸೇವೆ ಸಲ್ಲಿಸಿ ಗಣಪತಿಯ ಅನುಗ್ರಹಕ್ಕೆ ಪಾತ್ರರಾಗಿರುತ್ತಾರೆ. ಬೆಳಗಾವಿ ನಗರಕ್ಕೆ ಗಣಪತಿ ಆಗಮನ...
ಬೆಳಗಾವಿ: ಭಾರತಕ್ಕೆ ನಾಲ್ವರು ಒಲಂಪಿಕ್ ಹಾಕಿ ಆಟಗಾರರನ್ನು ನೀಡಿದ್ದು, ಕರ್ನಾಟಕ ಸರಕಾರ ಬೆಳಗಾವಿಗೆ ಅಂತರಾಷ್ಟ್ರೀಯ ಗುಣಮಟ್ಟದ ಹಾಕಿ ಮೈದಾನವನ್ನು ಇನ್ನೂ ನೀಡಿಲ್ಲ, ಅದಕ್ಕಾಗಿ ಜಿಲ್ಲಾಡಳಿತ ಕೂಡಲೇ ಬೆಳಗಾವಿ ಹಾಕಿ ಸಂಸ್ಥೆಯ ಆಸ್ಟ್ರೋಟರ್ಫ್ ಮೈದಾನದ...