ಕಾಂಗ್ರೆಸ್ ಪಕ್ಷ ಹಾಗೂ ಕರ್ನಾಟಕ ಸರ್ಕಾರದ ಪ್ರಮುಖ ಗ್ಯಾರಂಟಿ ಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಇಂದು ಅಧಿಕೃತವಾಗಿ ಮೈಸೂರ್ ಮಹಾರಾಜ ಕಾಲೇಜ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ಸಮ್ಮುಖದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಯಿತು.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತವರ ಜಿಲ್ಲೆಯಾದ ಬೆಳಗಾವಿ ಹಾಗೂ ಗ್ರಾಮೀಣ ಕ್ಷೇತ್ರದಲ್ಲಿ ಯೋಜನೆಯನ್ನು ನೇರ ಪ್ರಸಾರ ಆಯೋಜನೆಗಳ ಹಾಗೂ ಆಯಾ ಗ್ರಾಮ ಪಂಚಾಯತಿಗಳಲ್ಲಿ ಈ ಯೋಜನೆಗೆ ಚಾಲನೆ ನೀಡಲು ಜಿಲ್ಲಾ ಆಡಳಿತ ಹಾಗೂ ಸ್ಥಳೀಯ ಆಡಳಿತಗಳು ಕಾರ್ಯಕ್ರಮದ ಆಯೋಜನೆ ಮಾಡಲಾಗಿತ್ತು.
ಇದರ ಅಂಗವಾಗಿ ಬಾಳೆಕುಂದ್ರಿ K H ಗ್ರಾಮ ಪಂಚಾಯಿತಿ ಸಾವಿರಾರು ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗ ವಹಿಸಿದ್ದರು ಈ ಸಂದರ್ಭದಲ್ಲಿ ಬಾಳೆ ಕುಂದ್ರಿ ಕೆ ಎಚ್ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರೇವತಿ ಸಿಂಗೆ ಹಾಗೂ ಅವರ ಸಿಬ್ಬಂದಿ ವರ್ಗ ಮತ್ತು ಗ್ರಾಮ ಪಂಚಾಯತಿ ಸದಸ್ಯರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು