ಬೆಳಗಾವಿ: ಸವದತ್ತಿಯ ಹರ್ಷ ಸಕ್ಕರೆ ಕಾರ್ಖಾನೆಯ 2023-2024 ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಹಾಗೂ ಬಾಯ್ಲರ್ ಪ್ರದೀಪನ ಸಮಾರಂಭಕ್ಕೆ ಹೂಲಿ ಸಾಂಬಯ್ಯನವರ ಮಠದ ಶ್ರೀ ಉಮೇಶ್ವರ ಶಿವಾಚಾರ್ಯ ಸ್ವಾಮೀಜಿ ಸೋಮವಾರ ಚಾಲನೆಯನ್ನು ನೀಡಿದರು.
ಇದೇ ಸಮಯದಲ್ಲಿ ಹರ್ಷ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರ ಮಾರ್ಗದರ್ಶನದಂತೆ 2022-2023 ನೇ ಸಾಲಿನ ಹಂಗಾಮಿನಲ್ಲಿ ಕಾರ್ಖಾನೆಗೆ ಅತೀ ಹೆಚ್ಚು ಕಬ್ಬು ಪೂರೈಕೆ ಮಾಡಿದ 11 ಜನ ಪ್ರಗತಿಪರ ರೈತರನ್ನು ಗುರುತಿಸಿ, ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಹರ್ಷ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಚನ್ನರಾಜ ಹಟ್ಟಿಹೊಳಿ, ನಿರ್ದೇಶಕರ ಮೃಣಾಲ ಹೆಬ್ಬಾಳಕರ್, ಕಾರ್ಖಾನೆಯ ಪ್ರಧಾನ ವ್ಯವಸ್ಥಾಪಕ ಸದಾಶಿವ್ ತೋರಾಥ್, ಕಬ್ಬು ವಿಭಾಗದ ಪ್ರಧಾನ ವ್ಯವಸ್ಥಾಪಕ ಎನ್ ಎಮ್ ಪಾಟೀಲ, ಎಥೆನಾಲ್ ಘಟಕದ ವ್ಯವಸ್ಥಾಪಕ ಸಾಂಬ್ರೇಕರ್, ಕಾರ್ಖಾನೆಯ ಮುಖ್ಯ ಆಡಳಿತಾಧಿಕಾರಿ ಚೌಕಿಮಠ್, ದರ್ಗಾ ಅಜ್ಜನವರಾದ ಅಶ್ರಫ್ ಪೀರ್ ಖಾದ್ರಿ, ಸೋಮೇಶ್ವರ ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷ ಮಹಾಂತೇಶ ಮತ್ತಿಕೊಪ್ಪ, ಕಾರ್ಖಾನೆಯ ಎಲ್ಲ ವಿಭಾಗದ ಸಿಬ್ಬಂದಿ, ಬೈಲಹೊಂಗಲ, ಸವದತ್ತಿ, ಕಿತ್ತೂರು ಹಾಗೂ ಧಾರವಾಡ ಭಾಗದ ಪ್ರಮುಖ ರೈತ ಮುಖಂಡರು ಉಪಸ್ಥಿತರಿದ್ದರು.