ರಾಜ್ಯದಲ್ಲಿ ನಿರಂತರ ರೈತರ ಆತ್ಮಹತ್ಯೆ ಹಿನ್ನೆಲೆ ಹೆಚ್ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಬೆಳ್ಳಂಬೆಳಗ್ಗೆಯೇ ರೈತ ಆತ್ಮಹತ್ಯೆ ವರದಿ ಓದಿದಾಕ್ಷಣ ಸಂಕಟವಾಯಿತು. ಕಣ್ಣಾಲಿಗಳು ತುಂಬಿ ಬಂದವು, ಇನ್ನೆಷ್ಟು ದಿನ ಇಂತಹ ಸಾವು ನೋಡಬೇಕು.
ಕೇವಲ ಪ್ರಚಾರ, ಅಧಿಕಾರದ ಸುಖ ಅನುಭವಿಸುತ್ತಿರುವ ಸರ್ಕಾರಕ್ಕೆ ಅನ್ನದಾತನ ಸಾವಿನ ಕೇಕೆ ಸವಿಗಾನವಾಗಿದೆಯಾ? ವಾಸ್ತವ ಅರಿವಿಲ್ಲವೆ?ಸರ್ಕಾರಕ್ಕೆ ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ? ಜೀವಬಿಟ್ಟ ರೈತ ಕುಟುಂಬಗಳಿಗೆ ಮಾನವೀಯತೆಯ ನೆರವು ಕೊಡಬೇಕು ಎಂದು ಟ್ವೀಟ್ ಮೂಲಕ ಸರ್ಕಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.