ಬೆಳಗಾವಿ : ಮಡದಿಯ ಜತೆಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಸಂಶಯದಲ್ಲಿ ಚೂರಿಯಿಂದ ಇರಿದು ಅಣ್ಣನನ್ನೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ನಡೆದಿದೆ.
ಅಕ್ಬರ್ ಶೇಖ್ ಮೃತ ದುರ್ದೈವಿ. ಅಜ್ಮದ್ ಶೇಖ್ ಕೊಲೆ ಆರೋಪಿ. ತನ್ನ ಹೆಂಡತಿ ಜತೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಲ್ಲಿ ಅಕ್ಬರ್ ಶೇಖ್ನನ್ನು ಸಹೋದರ ಅಜ್ಮದ್ ಶೇಖ್ ಕೊಲೆ ಮಾಡಿದ್ದಾನೆ.
ಗ್ರಾಮದ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಮೊದಲಿಗೆ ಹಿಂಬಾಲಿಸಿಕೊಂಡು ಹೋಗಿರುವ ಅಜ್ಮದ್ ಶೇಖ್, ಅಪಘಾತ ಮಾಡಿ ಬೈಕ್ ನಲ್ಲಿ ತೆರಳುತ್ತಿದ್ದ ಅಣ್ಣ ಅಕ್ಬರ್ ಶೇಖ್ನನ್ನು ಕೆಳಗೆ ಬೀಳಿಸಿದ್ದಾನೆ. ಬಳಿಕ ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೊಲೆ ಮಾಡಿದ ನಂತರ ಆರೋಪಿ ಅಜ್ಮದ್ ಶೇಖ್ ಚಿಕ್ಕೋಡಿ ಪೊಲೀಸರಿಗೆ ಶರಣಾಗಿದ್ದಾನೆ.