Ad imageAd image

ಬೆಂಗಳೂರಲ್ಲಿ ಭಾರೀ ಮಳೆ ಮುನ್ಸೂಚನೆ, ನಾಳೆ ಶಾಲೆಗಳಿಗೆ ರಜೆ ಘೋಷಣೆ

ratnakar
ಬೆಂಗಳೂರಲ್ಲಿ ಭಾರೀ ಮಳೆ ಮುನ್ಸೂಚನೆ, ನಾಳೆ ಶಾಲೆಗಳಿಗೆ ರಜೆ ಘೋಷಣೆ
WhatsApp Group Join Now
Telegram Group Join Now

ಬೆಂಗಳೂರು: ಸತತ ಮಳೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಾಳೆ(ಅಕ್ಟೋಬರ್ 23) ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಿಸಿ ಜಗದೀಶ್ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ನಾಳೆ(ಅಕ್ಟೋಬರ್ 23) ಆರೆಂಜ್ ಅಲರ್ಟ್‌ ಇರುವ ಕಾರಣ ಮುಂಜಾಗ್ರತಾ ಕ್ರಮವಾಗಿ ನಗರದ ಎಲ್ಲಾ ಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಜಗದೀಶ್‌ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ನೀಡುವಂತೆ ಆದೇಶಿಸಿದ್ದು, ಶನಿವಾರ ಮಧ್ಯಾಹ್ನ ಅಥವಾ ಭಾನುವಾರ ಹೆಚ್ಚುವರಿ ತರಗತಿ ನಡೆಸಲು ಸೂಚಿಸದ್ದಾರೆ.

ಬೆಂಗಳೂರಿನ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗೀ ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದ್ದು, ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಇರಲ್ಲ. ಇನ್ನು ರಜೆ ನೀಡಲಾಗಿರುವ ಶಾಲೆಗಳಿಗೆ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರ ಹೆಚ್ಚುವರಿ ತರಗತಿ ನಡೆಸಲು ಸೂಚನೆ ನೀಡಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ನಾಳೆಯೂ ಸಹ ಅರೆಂಜ್ ಅಲರ್ಟ್​ ಇರುವ ಕಾರಣ ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗೀ/ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣಾರ್ಭಟ ಮುಂದುವರಿದಿದೆ. ಇಂದು (ಅಕ್ಟೋಬರ್ 22) ಸಹ ಮಧ್ಯಾಹ್ನದಿಂದ ಭಾರೀ ಮಳೆಯಾಗುತ್ತಿದ್ದು, ರಸ್ತೆಗಳು ಜಲಾವೃತವಾಗಿವೆ. ಇದರಿಂದ ಶಾಲೆಗೆ ಹೋಗಿದ್ದ ಮಕ್ಕಳು ನೀರಿನಲ್ಲೇ ನಡೆದುಕೊಂಡು ಮನೆ ಸೇರಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ನಾಳೆ ಅಂದರೆ ಅಕ್ಟೋಬರ್ 23ರಂದು ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

WhatsApp Group Join Now
Telegram Group Join Now
Share This Article