ಬೆಂಗಳೂರು : ಇನ್ಮುಂದೆ 9 ಮತ್ತು 10ನೇ ತರಗತಿಗಳನ್ನು ಪ್ರಾಥಮಿಕ ಶಿಕ್ಷಣದ ಭಾಗ ಎಂದು ಕರೆಯಲಾಗುತ್ತದೆ.ಈ ತರಗತಿಗಳು ಇನ್ನು ಮುಂದೆ ಪ್ರೌಢಶಿಕ್ಷಣದ ತರಗತಿಗಳಲ್ಲ. ಪ್ರಾಥಮಿಕ ಶಿಕ್ಷಣದ ಭಾಗವಾಗಲಿವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯು ಜ್ಞಾಪನಾ ಪತ್ರ ಹೊರಡಿಸಿದೆ.
ಈಗಾಗಲೇ ಒಂದರಿಂದ ರಿಂದ 8 ಅಥವಾ 6 ರಿಂದ 8 ನೇ ತರಗತಿಗಳು ನಡೆಯುತ್ತಿರುವ ಶಾಲಾ ಆವರಣದಲ್ಲಿ 9 ಮತ್ತು 10ನೇ ತರಗತಿಯನ್ನು ನೋಂದಾಯಿಸಲು ಅರ್ಜಿ ಸಲ್ಲಿಸಿದಲ್ಲಿ ಅಂತಹ ಅರ್ಜಿಗಳನ್ನು ಪ್ರಾಥಮಿಕ ಶಿಕ್ಷಣದ ಎಂದೇ ಪರಿಗಣಿಸಲಾಗುತ್ತದೆ. ಅದರ ಅನ್ವಯವೇ ನೋಂದಣಿ ನಿಯಮಗಳನ್ನು ಅನುಸರಿಸಲಾಗುತ್ತದೆ.
ಪ್ರಾಥಮಿಕ ಶಾಲೆಗಳಿರುವಲ್ಲಿಯೇ 9 ಮತ್ತು10 ನೇ ತರಗತಿಗಳನ್ನು ನಡೆಸುವುದಿದ್ದರೇ ಈ ತರಗತಿಗಳನ್ನು ಹೊಸ ಶಾಲೆ ಎಂದು ಪರಿಗಣಿಸಬಾರದು ಎಂದು ಇಲಾಖೆಯು ಸ್ಪಷ್ಟವಾಗಿ ಸೂಚಿಸಿದ್ದು, ಒಂದು ವೇಳೆ ಬೇರೆ ಆವರಣದಲ್ಲಿ 9 ಮತ್ತು 10 ನೇ ತರಗತಿಗಳನ್ನು ಪ್ರತ್ಯೇಕವಾಗಿ ಆರಂಭಿಸಿದ್ದಲ್ಲಿ ಮಾತ್ರ ಅಂತಹ ಶಾಲೆಯನ್ನು ಪ್ರೌಢ ಶಾಲೆಯೆಂದು ಪರಿಗಣಿಸಬೇಕು ಎಂದು ತಿಳಿಸಲಾಗಿದೆ.