ಬೆಂಗಳೂರು: ರಾಜ್ಯ ಸಹಾಯಕ ಪ್ರಾಧ್ಯಾಪಾಕರ ಅರ್ಹತಾ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೂಲಕ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ಯುಜಿಸಿಯಿಂದ ಮಾನ್ಯತೆ ಅಗತ್ಯವಿರುವ ರಾಜ್ಯ ಅರ್ಹತಾ ಪರೀಕ್ಷೆಯನ್ನು ನಡೆಸಲು ಯುಜಿಸಿಯ ಪರಿಕಲ್ಪನೆ ಮತ್ತು ವ್ಯಾಪ್ತಿಯಡಿ ರಾಜ್ಯ ಸರ್ಕಾರವು ಒಂದು ಏಜೆನ್ಸಿಯನ್ನು ಗುರುತಿಸಬಹುದು.
ಅದು ವಿಶ್ವವಿದ್ಯಾನಿಲಯವಾಗಿರಬಹುದು ಅಥವಾ ಪ್ರತಿಷ್ಠಿತ ಪರೀಕ್ಷಾ ಸಂಸ್ಥೆ ಅಥವಾ ಉನ್ನತ ಶಿಕ್ಷಣಕ್ಕಾಗಿ ಶಿಕ್ಷಕರ ನೇಮಕಾತಿಗೆ ಸಂಬಂಧಿಸದ ಪ್ರತಿಷ್ಠಿತ ಸಂಸ್ಧೆಯಾಗಿರಬಹುದೆಂಬ ಅವಕಾಶದಡಿ 2022ನೇ ಸಾಲನ್ನು ಒಳಗೊಂಡಂತೆ ಮುಂದಿನ ಆದೇಶದವರೆಗೆ ಕೆ-ಸೆಟ್ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಸುವಂತೆ ಆದೇಶಿಸಿದ್ದಾರೆ.