ಬೆಂಗಳೂರು : ಬಾಲ್ಯ ವಿವಾಹ ತಡೆಗೆ ಮಹತ್ವದ ಕ್ರಮ ಕೈಗೊಂಡಿದ್ದು, ಮದುವೆಯ ಕಡ್ಡಾಯ ನೋಂದಣಿ ಅಧಿಕಾರ ಗ್ರಾಮಪಂಚಾಯಿತಿಗಳಿಗೆ ವಹಿಸುವಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಬಾಲ್ಯ ವಿವಾಹಗಳು ಹೆಚ್ಚಳವಾಗುತ್ತಿದ್ದು, ಈ ವ್ಯವಸ್ಥೆಯನ್ನು ತಡೆಯಲು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮದುವೆಯ ನೋಂದಣಿಯನ್ನು ಗ್ರಾಮ ಪಂಚಾಯಿತಿ ಅಧಿಕಾರ ವ್ಯಾಪ್ತಿಗೆ ಒಳಪಡಿಸಬೇಕು ಶಿಫಾರಸು ಮಾಡಿದೆ.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ನೋಂದಣಿ ಜವಾಬ್ದಾರಿ ವಹಿಸಿ 250 ರೂ. ಒಳಗೆ ಶುಲ್ಕ ನಿಗದಿ ಮಾಡಿ ನೋಂದಣಿ ಕಡ್ಡಾಯಗೊಳಿಸಬೇಕು ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹೇಳಿದೆ.