spot_img
spot_img
spot_img
28.1 C
Belagavi
Thursday, September 29, 2022
spot_img

3 ತಿಂಗಳೊಳಗೆ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲು ಹೈಕೋರ್ಟ್ ಗಡುವು

spot_img

ಬೆಂಗಳೂರು:ಈಗಾಗಲೇ ರಾಜ್ಯದಲ್ಲಿ ಬಿಬಿಎಂಪಿ, ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಲಾಗಿದೆ.

ಈ ಸಂಬಂಧ ಹೈಕೋರ್ಟ್ ಕೂಡ 3 ತಿಂಗಳ ಒಳಗಾಗಿ ಮೀಸಲಾತಿ, ಕ್ಷೇತ್ರಗಳ ಮರುವಿಂಗಡಣೆಯನ್ನು ಮುಕ್ತಾಯಗೊಳಿಸಿದ ಒಂದು ವಾರದಲ್ಲಿ ಚುನಾವಣೆ ಪ್ರಕ್ರಿಯೆ ಆರಂಭಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.

ಜಿಲ್ಲಾ, ತಾಲೂಕು ಪಂಚಾಯ್ತಿಗಳ ಗಡಿ ನಿರ್ಣಯ ಮತ್ತು ಮೀಸಲಾತಿ ಸಂಬಂಧ ಚುನಾವಣಾ ಆಯೋಗ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾದ ರಿತುರಾಜ್ ಆವಸ್ಥಿ ಹಾಗೂ ಅಶೋಕ್ ಎಸ್ ಕಿಣಗಿ ಅವರನ್ನೊಳಗೊಂಡ ನ್ಯಾಯಪೀಠವು ವಿಚಾರಣೆ ನಡೆಸಿತು.

ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗದ ವಾದ, ಪ್ರತಿವಾದವನ್ನು ಆಲಿಸಿದಂತ ನ್ಯಾಯಪೀಠವು, 12 ವಾರಗಳ ಅಂದರೆ ಮೂರು ತಿಂಗಳ ಒಳಗಾಗಿ ಕ್ಷೇತ್ರ ಮರುವಿಂಗಡಣೆ ಹಾಗೂ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸಿ ಅಧಿಸೂಚನೆ ಹೊರಡಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿದೆ.

ಇದರ ನಂತರ ಒಂದು ವಾರದಲ್ಲಿ ಚುನಾವಣಾ ಆಯೋಗವು ಚುನಾವಣಾ ಪ್ರಕ್ರಿಯೆ ಮುಗಿಸುವಂತೆ ತಿಳಿಸಿದೆ. ಯಾವುದೇ ಕಾರಣ ನೀಡಿ, ಮತ್ತೆ ಸಮಯ ವಿಸ್ತರಣೆಗೆ ಕೋರುವಂತಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

spot_img

Related News

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

ಯಾರ ಮೇಲೆ ಜಾಸ್ತಿ ಪ್ರೀತಿ ಇರುತ್ತೋ ಅವರ ಮೇಲೆ ರೈಡ್ ಮಾಡ್ತಾರೆ : ಡಿಕೆಶಿ 

ಬೆಂಗಳೂರು: ಈಗಾಗಲೇ ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -