ಹುಬ್ಬಳ್ಳಿ: ನಗರದಲ್ಲಿನ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಪಾಲಿಕೆ ನೀಡಿದ್ದಂತ ಅನುಮತಿ ಪ್ರಶ್ನಿಸಿ, ಅಂಜುಮಾನ್ ಇಸ್ಲಾಂ ಸಂಸ್ಥೆ ಸಲ್ಲಿಸಿದ್ದಂತ ಆಕ್ಷೇಪಣೆಯನ್ನು ವಜಾಗೊಳಿಸಿರುವಂತ ಹೈಕೋರ್ಟ್, ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿದೆ.
ಹೈಕೋರ್ಟ್ ನ್ಯಾಯಪೀಠದಲ್ಲಿ ಅಂಜುಮಾನ್ ಇಸ್ಲಾಂ ಸಂಸ್ಥೆಯಿಂದ ಗಣೇಶೋತ್ಸವ ಅನುಮತಿಗಾಗಿ ರಚಿಸಿದ್ದಂತ ಸಮಿತಿಯ ಬಗ್ಗೆ ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಪೀಠವು, ಗಣೇಶೋತ್ಸವ ಕೂರಿಸವು ಬಗ್ಗೆ ನಿರ್ಧಿರಸೋ ಅಧಿಕಾರ ಹುಬ್ಬಳ್ಳಿ – ಧಾರವಾಡ ಪಾಲಿಕೆ ಆಯುಕ್ತರಿಗೆ ಇದೆ ಎಂಬುದಾಗಿ ಅಭಿಪ್ರಾಯ ಪಟ್ಟಿದೆ.