spot_img
22.9 C
Belagavi
Saturday, December 3, 2022
spot_img

545 ಪಿಎಸ್‌ಐ ಹುದ್ದೆಗಳ ಮರು ಪರೀಕ್ಷೆಗೆ ಹೈಕೋರ್ಟ್ ತಡೆ

ಬೆಂಗಳೂರು : 545 ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಮುಂದಿನ ಆದೇಶದವರೆಗೆ ಪಿಎಸ್‌ಐ ಮರುಪರೀಕ್ಷೆ ದಿನಾಂಕ ಪ್ರಕಟಿಸಬಾರದು ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಆದೇಶ ಹೊರಡಿಸಿದೆ. ಮರುಪರೀಕ್ಷೆ ರದ್ದು ಕೋರಿ ಹಲವು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆ ಕೋರ್ಟ್ ಆದೇಶ ಹೊರಡಿಸಿದೆ.

ಆರೋಪಿಗಳ ಮೇಲೆ ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ದಿನೇ ದಿನೇ ಅಕ್ರಮದಲ್ಲಿ ಪಾಲ್ಗೊಂಡವರ ಸಂಖ್ಯೆ ಹೆಚ್ಚಾಗೆ ಸಿಐಡಿ ತನಿಖೆಯಿಂದ ಹೊರಬೀಳುತ್ತಿದೆ.

ಈ ಹಿಂದೆ ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಮರುಪರೀಕ್ಷೆಗೆ ದಿನಾಂಕವನ್ನು ಶೀಘ್ರದಲ್ಲೇ ನಿಗದಿಮಾಡಿ, ಪ್ರಕಟಿಸಲಾಗುವುದು ಎಂದು ಹೇಳಿದ್ದರು.

Related News

50 ಲಕ್ಷ ರೂ,ಗಳ ವೆಚ್ಚದಲ್ಲಿ ಮಂಡೋಳಿ ಗ್ರಾಮದ ರಸ್ತೆಗಳ ಅಭಿವೃದ್ಧಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಂಡೋಳಿ ಗ್ರಾಮದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಗಣಿ ನಿಧಿಯ ವತಿಯಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು 50 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿದ್ದು, ಶನಿವಾರ...

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮುಂದುವರಿದ ಅಭಿವೃದ್ಧಿ ಯೋಜನೆಗಳ ಸರಣಿ

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಲ್ಲೆಹೋಳ ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 60 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಶನಿವಾರ ಕಾಂಕ್ರೀಟ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -