spot_img
spot_img
spot_img
18.5 C
Belagavi
Thursday, September 29, 2022
spot_img

ಬೆಳಗಾವಿಯಲ್ಲಿ ಮುಂದುವರೆದ ಹಿಜಾಬ್ ವಿವಾದ: ಶಿಕ್ಷಣ ಬಿಡುತ್ತೇವೆ ಹಿಜಾಬ್ ಬಿಡಲ್ಲಾ ಎಂದ ವಿದ್ಯಾರ್ಥಿಗಳು

spot_img

ಬೆಳಗಾವಿ: ಬೆಳಗಾವಿಯಲ್ಲಿ ಇಂದು ಕೂಡ ಹಿಜಾಬ್ ವಿವಾದ ಮುಂದುವರೆದಿದೆ. ನಗರದ ವಿಜಯಾ ಇನ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ವಿದ್ಗಯಾರ್ಥಿನಿಯರು ಹಿಜಾಬ್ ಧರಿಸಿ ಆಗಮಿಸಿದ್ದು ಡಿಪ್ಲೋಮಾ ಮತ್ತು ಪ್ಯಾರಾಮೆಡಿಕಲ್ ಕಾಲೇಜುಗಳಲ್ಲಿ ಹಿಜಾಬ್ ಧಾರಣೆಗೆ ಅವಕಾಶವಿದ್ದು ನಮಗೆ ಹಿಜಾಬ್ ಹಾಕಿ ತರಗತಿ ಪ್ರವೇಶಿಸಲು ಅವಕಾಶ ಕೊಡಿ ಎಂದು ಕಾಲೇಜು ಆವರಣೆದಲ್ಲಿ ಪಟ್ಟು ಹಿಡಿದು ನಿಂತಿರುವ ಘಟನೆ ನಡೆದಿದೆ.

ವಿಜಯಾ ಇನ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಕಾಲೇಜಿಗೆ ಹಿಜಾಬ್ ಮತ್ತು ಬುರುಕಾ ಧಾರಣೆ ಮಾಡಿ ಬಂದ ವಿದ್ಯಾರ್ಥಿನಿಯರು ಡಿಪ್ಲೋಮಾ ಮತ್ತು ಪ್ಯಾರಾಮೆಡಿಕಲ್ ಕಾಲೇಜುಗಳಲ್ಲಿ ಹಿಜಾಬದ ಧಾರಣೆ ಮಾಡಲು ಅನುಮತಿ ಇದೆ ಅದಕ್ಕೆ ಸಂಬಂಧಿಸಿದಂತೆ ನಮ್ಮ ಬಳಿ ಪ್ರತಿ ಇದೆ.

ಆದರೂ ಕಾಲೇಜಿನವರು ನಮ್ಮನ್ನು ತಡೆಯುವ ಕೆಲಸ ಮಾಡುತ್ತಿದ್ದಾರೆ. ಹಿಜಾಬ್ ನಮಗೆ ನಮ್ಮ ಧರ್ಮ ಕೊಟ್ಟಿರುವ ಹಕ್ಕು ಇದನ್ನು ಯಾವುದೇ ಕಾರಣಕ್ಕೂ ನಾವು ತೆಗೆಯಲ್ಲ ಬೇಕಾದರೆ ತರಗತಿಯನ್ನು ಬಿಡುತ್ತೇವೆ ಹಿಜಾಬ್ ಬಿಡಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ವಿದ್ಯಾರ್ಥಿನಿಯರಿಗೆ ಕಾಲೇಜು ಆಡಳಿತ ಮಂಡಳಿಯು ಮನವೊಲಿಸಲು ಪ್ರಯತ್ನಿಸಿದರು ಇದಕ್ಕೆ ಜಗ್ಗದ ಅವರು ಹಿಜಾಬ್ ನಮ್ಮ ಹಕ್ಕು ಎಂದು ಆಗ್ರಹಿಸಿದರು. ಇನ್ನು ಸ್ಥಳದಲ್ಲಿ ಪೊಲೀಸ್ ನಿಯೋಜನೆ ಮಾಡಲಾಗಿದ್ದು ಯಾವುದೇ ಗಲಾಟೆಯಾಗದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -