ಬೆಳಗಾವಿ: ವಿಜಯಾ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಕಳೆದ ೆರಡು ದಿನಗಳಿಂದ ಹಿಜಾಬ್ ವಿವಾದ ತಾರಕಕ್ಕೇರಿದ ಬೆನ್ನಲ್ಲೇ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದ್ದು ಜಿಲ್ಲಾಧಿಕಾರಿಗಳ ಮುಂದಿನ ಆದೇಶದವರೆಗೂ ರಜೆ ಗೋಷಣೆಮಾಡಲಾಗಿದೆ ಎಂದು ಪ್ರಾಂಶುಪಾಲ ಪ್ರಕಾಶ ಪಾಟೀಲ್ ಹೇಳಿದ್ದಾರೆ.
ಮಾದ್ಯಮಗಳೊಂದಿಗೆ ಮಾತನಾಡಿದ ಅವರು ಕಳೆದ ಮೂರು ದಿನಗಳಿಂದ ಕಾಲೇಜಿನಲ್ಲಿ ಹಿಜಾಬ್ ಸಂಘರ್ಷ ಮುಂದುವರೆದಿತ್ತು. ಇಂದು ಕೂಡ 12 ವಿದ್ಯಾರ್ಥಿನಿಯರು ಹಿಜಾಬ್ ಹಾಗೂ ಬುರ್ಖಾ ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ.
ನ್ಯಾಯಾಲಯ ಾದೇಶ ಪಾಲಿಸುವಂತೆ ವಿದ್ಯಾರ್ಥಿಗಳಿಗೆ ಮನವೊಲಿಸಲು ಪ್ರಯತ್ನಿಸಿದರು ಸಾಧ್ಯವಾಘುತ್ತಿಲ್ಲ. ಪರಿಸ್ಥಿತಿ ವಿಕೋಪಕ್ಕೆ ಹೋಗದಂತೆ ತಡೆಯಲು ಕಾಲೇಹಿಗೆ ರಜೆ ಘೋಷಣೆ ಮಾಡಲಾಗಿದೆ ಎಂದರು.