ನವದೆಹಲಿ: ಕೇಂದ್ರ ಸರ್ಕಾರದು ಹಿಜಡಾ ವಿದೇಶಾಂಗ ನೀತಿ ಎಂದು ಬಿಜೆಪಿ ನಾಯಕ, ಮಾಜಿ ಸಂಸದ ಸುಬ್ರಮಣಿಯನ್ ಸ್ವಾಮಿ ವಿದೇಶಾಂಗ ಸಚಿವ ಜೈಶಂಕರ್ ವಿರುದ್ಧ ಕಿಡಿಕಾರಿದ್ದಾರೆ.
ಕ್ವಾಡ್, ಬ್ರಿಕ್ಸ್ ಸಭೆಗಳಲ್ಲಿ ಭಾಗವಹಿಸಲು ವಿದೇಶಾಂಗ ಸಚಿವ ಜೈಶಂಕರ್ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿಯೊಂದನ್ನು ಟ್ವಿಟರ್ ಬಳಕೆದಾರರೊಬ್ಬರು ಪೋಸ್ಟ್ ಮಾಡಿದ್ದರು. ಅದನ್ನು ಸುಬ್ರಮಣಿಯನ್ ಸ್ವಾಮಿ ಅವರಿಗೆ ಟ್ಯಾಗ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಸ್ವಾಮಿ, ಹಿಜಡಾ ವಿದೇಶಾಂಗ ನೀತಿ ಎಂದು ಕಿಡಿಕಾರಿದ್ದಾರೆ.
Hijda foreign policy
— Subramanian Swamy (@Swamy39) September 19, 2022
ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಭಾನುವಾರದಿಂದ 10 ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಸುಬ್ರಮಣಿಯನ್ ಸ್ವಾಮಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ನಡೆ ಬಗ್ಗೆ ದಾಳಿ ಮಾಡುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ ಮೇ ತಿಂಗಳಲ್ಲಿ, ಜಿ-7 ಸಭೆಯಲ್ಲಿ ಪಾಲ್ಗೊಳ್ಳಲು ಲಂಡನ್ ಪ್ರವಾಸ ಕೈಗೊಂಡಿದ್ದ ಜೈಶಂಕರ್ ಅವರನ್ನು ವೇಟರ್ ಎಂದು ಅಪಹಾಸ್ಯ ಮಾಡಿದ್ದರು.
ಲಂಡನ್‌ನ ಹೋಟೆಲ್‌ನಲ್ಲಿ ಜೈಶಂಕರ್ ವಿಡಿಯೊ ಕಾನ್ಫರೆನ್ಸ್ ಮೂಲಕ ಜಿ-7 ಸಭೆಯಲ್ಲಿ ಭಾಗವಹಿಸಿದ್ದಾರೆ. ಹೋಟೆಲ್ ಕೊಠಡಿ ಮೂಲಕ ಶೃಂಗಶಭೆಯಲ್ಲಿ ಭಾಗವಹಿಸಲು ಬ್ರಿಟನ್ ಪ್ರವಾಸ ಯಾಕೆ ಬೇಕು ತೆರಿಗೆದಾರರ ಹಣವನ್ನು ಏಕೆ ವ್ಯರ್ಥ ಮಾಡಬೇಕೆಂದು ಅನೇಕರು ಕೇಳುತ್ತಿದ್ದಾರೆ ಎಂದು ಅವರು ಟೀಕೆ ಮಾಡಿದ್ದರು.
ಮೋದಿ ಸರ್ಕಾರದ 8 ವರ್ಷಗಳ ಅವಧಿಯಲ್ಲಿ, ಭಾರತಮಾತೆ ನಾಚಿಕೆಯಿಂದ ತಲೆ ತಗ್ಗಿಸಬೇಕಾಗಿ ಬಂತು. ಏಕೆಂದರೆ ನಾವು ಲಡಾಖ್‌ನಲ್ಲಿ ಚೀನಿಯರ ಎದುರು ತೆವಳಿ ನಡೆಯಬೇಕಾಯಿತು, ರಷ್ಯನ್ನರ ಮುಂದೆ ಮಂಡಿಯೂರಬೇಕಾಯಿತು, ಈಗ ಚಿಕ್ಕ ರಾಷ್ಟ್ರ ಕತಾರ್ ಎದುರು ಸಾಷ್ಟಂಗ ನಮಸ್ಕಾರ ಮಾಡಿದ್ದೇವೆ. ನಮ್ಮ ವಿದೇಶಾಂಗ ನೀತಿಯ ಅಧಃಪತನವಾಗಿದೆ ಎಂದು ಅವರು ಟ್ವಿಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು.