spot_img
spot_img
spot_img
21.1 C
Belagavi
Friday, September 30, 2022
spot_img

ನಾಲ್ವರು ಮನೆಗಳ್ಳರ ಹೆಡೆಮುರಿ ಕಟ್ಟಿದ ಹಿರೇಬಾಗೇವಾಡಿ ಪೊಲೀಸರು

spot_img

ಬೆಳಗಾವಿ: ಹಿರೇಬಾಗೇವಾಡಿ ಹಾಗೂ ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯ 2 ಕಳ್ಳತನ ಕೇಸ್ಗಳನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು ಹಿರೇಬಾಗೇವಾಡಿ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ನಾಲ್ವರು ಮನೆಗಳ್ಳರಿಗೆ ಹೆಡೆಮುರಿ ಕಟ್ಟಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಿದ ಬಂಧಿತರಿಂದ ಬಂಧಿತರಿಂದ ಒಟ್ಟು 14 ಲಕ್ಷ 69 ಸಾವಿರ ಮೌಲ್ಯದ ಬಂಗಾರದ ಆಭರಣಗಳು, ನಗದು, ಗೃಹಪಯೋಗಿ ವಸ್ತುಗಳು ಹಾಗೂ 3 ಬೈಕ್ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ತಾರಿಹಾಳ ಗ್ರಾಮದ ಶಿವಾಜಿ ಗಲ್ಲಿಯ ನಾಗೇಂದ್ರ(ಸ್ವಾಮಿ) ತಿಪ್ಪಣ್ಣ ಕೊಳಿಕೊಪ್ಪ(23), ಜ್ಯೋತಿಭಾ(27), ತಾರಿಹಾಳ ಗ್ರಾಮದ ಸಂಭಾಜಿ ಗಲ್ಲಿಯ ಮಹೇಶ ಪ್ರಕಾಶ ಖನಗಾಂವಕರ್(21), ತಾರಿಹಾಳ ಗ್ರಾಮದ ರಾಮಾಪುರ ಗಲ್ಲಿಯ ಮಂಜುನಾಥ್ ಅಪ್ಪಯ್ಯ ಕೊಳೇಕರ್(21) ಎಂದು ಗುರುತಿಸಲಾಗಿದೆ.

ಹಿರೇಬಾಗೇವಾಡಿ ಸಿಪಿಐ ವಿಜಯಕುಮಾರ್ ಸಿನ್ನೂರ ನೇತೃತ್ವದ ತಂಡವು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಹಿರೇಬಾಗೇವಾಡಿ ಪೊಲೀಸರು ತನಿಖೆ ಮುಂದುವರಿದ್ದಾರೆ. ಹಿಗೇಬಾಗೇವಾಡಿ ಪೊಲೀಸರ ಕಾರ್ಯಕ್ಕೆ ಹಿರಿಯ ಪೊಲೀಸರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

spot_img

Related News

ಸಿಮ್ ಕಾರ್ಡ್ ಪಡೆಯಲು ನಕಲಿ ದಾಖಲೆ ನೀಡಿದರೇ 1 ವರ್ಷ ಜೈಲು, 50 ಸಾವಿರ ದಂಡ

ನವದೆಹಲಿ: ಸಿಮ್ ಕಾರ್ಡ್ ಪಡೆಯಲು ನಕಲಿ ದಾಖಲೆ ನೀಡಿದರೇ ಭಾರತೀಯ ದೂರಸಂಪರ್ಕ ಮಸೂದೆ 2022 ರ ಸಿದ್ಧಪಡಿಸಿದ ಕರಡು ಪ್ರತಿಯ ಪ್ರಕಾರ, ನೀವು ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಅಥವಾ 50,000...

ಅಭಿವೃದ್ಧಿಯ ಕ್ರಾಂತಿಯನ್ನೇ ಮಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ : ಚನ್ನರಾಜ ಹಟ್ಟಿಹೊಳಿ

ಬೆಳಗಾವಿ : ಕಳೆದ ನಾಲ್ಕೂವರೆ ವರ್ಷದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಅಭಿವೃದ್ಧಿಯ ಕ್ರಾಂತಿಯನ್ನೇ ಮಾಡಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿ ಇನ್ನಷ್ಟು ವೇಗ ಪಡೆಯಲಿದೆ ಎಂದು ವಿಧಾನ ಪರಿಷತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -