spot_img
spot_img
spot_img
21.1 C
Belagavi
Friday, September 30, 2022
spot_img

ತಮ್ಮ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ಸಿಎಂ 

spot_img

ಬೆಂಗಳೂರು: ಇಂದು ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದಂತ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಹಠಾತ್ ನಿಧನರಾದಂತ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ಅವರ ಪಾರ್ಥೀವ ಶರೀರದ ಅಂತಿಮ ದರ್ಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಡೆದರು.

ಅವರ ನಿವಾಸಕ್ಕೆ ತೆರಳಿದಂತ ಬಸವರಾಜ ಬೊಮ್ಮಾಯಿಯವರು, ಗುರುಲಿಂಗಸ್ವಾಮಿ ಹೊಳಿಮಠ ಪಾರ್ಥೀವ ಶರೀರಕ್ಕೆ ಮಾಲಾರ್ಪಣೆ ಮಾಡಿ, ಅಂತಿಮ ನಮನ ಸಲ್ಲಿಸಿದರು. ಅಲ್ಲದೇ ಅವರ ಪತ್ನಿ, ಮಕ್ಕಳಿಗೆ ಸಿಎಂ ಬೊಮ್ಮಾಯಿ ಸಾಂತ್ವಾನ ಹೇಳಿದರು.

ಈ ಬಳಿಕ ಮಾತನಾಡಿದ ಅವರು, ಗುರುಲಿಂಗಸ್ವಾಮಿ ಒಬ್ಬ ಯುವ ಸ್ನೇಹಿತ. ಅವರ ಅಕಾಲಿಕ ನಿಧನ ದಿಗ್ಭ್ರಮೆ ಮೂಡಿಸಿದೆ. ಅವನನ್ನು ಸುಮಾರು 20 ವರ್ಷಗಳಿಂದ ಬಲ್ಲೆ. ರಾಮದುರ್ಗದ ಹಳ್ಳಿಯೊಂದರಲ್ಲಿರುವಂತ ಇವರ ಕುಟುಂಬಸ್ಥರು ಗೌರವಾನ್ವಿತರು ಎಂದರು.

ಪ್ರತಿನಿತ್ಯ ಎರಡು ಮೂರು ಜನರಿಗೆ ಸಹಾಯ ಮಾಡುತ್ತಿದ್ದರು. ನಿನ್ನೆ ಬೆಳಿಗ್ಗೆಯಿಂದ ರಾತ್ರಿಯವರೆಗೆ ನನ್ನ ಜೊತೆಗೆ ಇದ್ದರು. ಬೆಳಿಗ್ಗೆ ಎದ್ದು ನೋಡಿದ್ರೇ.. ಹೀಗೆ ಅವರ ಅಕಾಲಿಕ ನಿಧನ ಕೇಳಿ ಶಾಕ್ ಆಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಸ್ಥರಿಗೆ ದುಖ ಬರಿಸೋ ಶಕ್ತಿಯನ್ನು ಕೊಡಲಿ ಎಂದರು.

 

 

spot_img

Related News

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -