ಬೆಂಗಳೂರು : ಇಂದಿನಿಂದ ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯ ಸರ್ಕಾರಿ ಪದವಿ ಕಾಲೇಜುಗಳಿಗೆ ಅಕ್ಟೋಬರ್ 1 ರಿಂದ 9 ರವರೆಗೆ ರಜೆ ಘೋಷಿಸಲಾಗಿದೆ.
ಪ್ರಾಧ್ಯಾಪಕರ ಸಂಘದ ಮನವಿ ಪರಿಗಣಿಸಿ ಅಕ್ಟೋಬರ್ 1 ರಿಂದ ಅಕ್ಟೋಬರ್ 9 ರವರೆಗೆ ರಜೆ ನೀಡಿರುವ ಕಾಲೇಜು ಶಿಕ್ಷಣ ಇಲಾಖೆಯು, ಶೈಕ್ಷಣಿಕ ಕಾರ್ಯಗಳನ್ನು ಅನುಷ್ಠಾನಗೊಳಿಸುವುದಕ್ಕೆ ಯಾವುದೇ ತೊಂದರೆಯಾಗದಂತೆ ವಿಶ್ವವಿದ್ಯಾಲಯಗಳು ಕ್ರಮ ವಹಿಸಲು ಸೂಚಿಸಲಾಗಿದೆ.