Ad imageAd image

ನಾಗಮಂಗಲದಲ್ಲಿ ಕೋಮು ಗಲಭೆಯಾಗಿಲ್ಲ, ಆಕಸ್ಮಿಕ ಘಟನೆ: ಗೃಹ ಸಚಿವ ಪರಮೇಶ್ವರ್

ratnakar
ನಾಗಮಂಗಲದಲ್ಲಿ ಕೋಮು ಗಲಭೆಯಾಗಿಲ್ಲ, ಆಕಸ್ಮಿಕ ಘಟನೆ: ಗೃಹ ಸಚಿವ ಪರಮೇಶ್ವರ್
WhatsApp Group Join Now
Telegram Group Join Now

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಸಂಭವಿಸಿದ ಗಲಭೆ ಪ್ರಕರಣದ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದು, ಅಲ್ಲಿ ಕೋಮು ಗಲಭೆಯಾಗಿಲ್ಲ ಆಕಸ್ಮಿಕ ಘಟನೆ ಎಂದಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ ಆಗಿದೆ. ಅದು ಕೋಮು ಗಲಭೆ ಅಲ್ಲ, ಆಕಸ್ಮಿಕವಾಗಿ ನಡೆದಿರುವ ಘಟನೆ. ಒಬ್ಬರಿಗೊಬ್ಬರು ಘರ್ಷಣೆ ಮಾಡಿಕೊಂಡಿದ್ದಾರೆ ಎಂದಿದ್ದಾರೆ.

ಗಲಾಟೆ ವೇಳೆ ಬೈಕ್​ಗಳು, ಅಂಗಡಿಗೆ ಬೆಂಕಿ ಹಾಕಿದ್ದಾರೆ. ಗಣೇಶ ವಿಸರ್ಜನೆ ವೇಳೆ ಯಾರೋ ಕಲ್ಲು ತೂರಾಟ ಮಾಡಿದ್ದಾರೆ. ಅದಕ್ಕೆ ಈ ಕಡೆಯಿಂದಲೂ ಕಲ್ಲು ತೂರಾಟ ಮಾಡಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಆಗಿಲ್ಲ. ಸದ್ಯ ಸ್ಥಳದಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.

ನಾಗಮಂಗಲ ಘಟನೆ ಸಂಬಂಧ ಸುಮಾರು 52 ಜನರನ್ನು ಬಂಧಿಸಲಾಗಿದೆ. ಕಲ್ಲು ತೂರಾಟ ವೇಳೆ ಒಬ್ಬ ಎಎಸ್​ಐಗೂ ಗಾಯವಾಗಿದೆ. ಈ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ಅವರು ಮನವಿ ಮಾಡಿದ್ದಾರೆ.

ಗಣೇಶ ವಿಸರ್ಜನೆ ವೇಳೆ ಗಲಭೆ ಪ್ರಕರಣ ಸಂಬಂಧ ನಾಗಮಂಗಲಕ್ಕೆ ಬಿಜೆಪಿ ನಾಯಕರ ನಿಯೋಗ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿ. ರಾಜಕೀಯ ಮಾಡಬೇಡಿ ಎಂದು ನಾನು ಬಿಜೆಪಿ ನಾಯಕರಲ್ಲಿ ಮನವಿ ಮಾಡುತ್ತೇನೆ. ಅವರು ಕಾನೂನಾತ್ಮಕವಾಗಿ ಸಲಹೆ ಕೊಡಲಿ. ಎಡಿಜಿಪಿ ಹೋಗಿದ್ದಾರೆ, ಅವಶ್ಯಕತೆ ಇದ್ದರೆ ನಾನು ಹೋಗುತ್ತೇನೆ ಎಂದರು.

WhatsApp Group Join Now
Telegram Group Join Now
Share This Article