spot_img
spot_img
spot_img
18.5 C
Belagavi
Thursday, September 29, 2022
spot_img

ಹೋಂ ವರ್ಕ್ ಒತ್ತಡ ಹೆಚ್ಚಾಗಿ ಪೆಟ್ರೋಲ್ ಸುರಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

spot_img

ತಮಿಳುನಾಡು : ಹೋಂ ವರ್ಕ್ ಒತ್ತಡ ಹೆಚ್ಚಾಗಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ತಮಿಳುನಾಡಿನ ತಿರುವರುರ್ ಜಿಲ್ಲೆಯ ಪೆರಲಂನಲ್ಲಿ ಘಟನೆ ನಡೆದಿದೆ.

14 ವರ್ಷದ ಸಂಜಯ್ ಮೃತ ವಿದ್ಯಾರ್ಥಿಯಾಗಿದ್ದಾನೆ. ಖಾಸಗಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಹೋಮ್ ವರ್ಕ್ ಕಾರಣಕ್ಕೆ ಸಾಕಾಗಿ ಹೋಗಿದ್ದ ಎನ್ನಲಾಗಿದೆ. ಹೀಗಾಗಿ ಶಾಲೆಯನ್ನು ಬದಲಿಸುವಂತೆ ತನ್ನ ಪೋಷಕರಿಗೆ ಪದೇ ಪದೇ ಹೇಳುತ್ತಿದ್ದ ಎಂದು ತಿಳಿದುಬಂದಿದೆ.

ಯಾವಾಗ ತನ್ನ ಪೋಷಕರು ಶಾಲೆ ಬದಲಿಸಲು ನಿರಾಕರಿಸಿದರೋ ಇನ್ನಷ್ಟು ಒತ್ತಡಕ್ಕೊಳಗಾದ ಸಂಜಯ್ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದು, ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಆತನನ್ನು ತಿರುವುರ್ ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -